ಬೆಂಗಳೂರು ;- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ನಾಳೆ ವಿದ್ಯುತ್ ನಿರ್ವಹಣಾ ಕಾಮಗಾರಿಯಿಂದ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಗಿಡನ ಕೋನೇನಹಳ್ಳಿ, ಉಪಕಾರ ಲೇಔಟ್ ಸೇರಿದಂತೆ ಬ್ಯಾಡರಹಳ್ಳಿ ಸುತ್ತಮುತ್ತಲಿನ ಪ್ರದೇಶಗಳು. ಹಾಗೂ ಸುಂಕದಕಟ್ಟೆ, ಹೇರೋಹಳ್ಳಿ, ಕೆಂಪೇಗೌಡ ನಗರ, ಗೊಲ್ಲರಹಟ್ಟಿ, ತುಂಗಾನಗರ, ಹೊಸಳ್ಳಿ, ಅನ್ನಪೂರ್ಣೇಶ್ವರಿ ನಗರ, ಶಂಕ್ರಪ್ಪ ಕೈಗಾರಿಕಾ ಪ್ರದೇಶ, ಹೆಗ್ಗನಹಳ್ಳಿ, ಬಿಇಎಲ್ 2ನೇ ಹಂತ, ಅಂಜನಾನಗರದಲ್ಲಿ ನಾಳೆ ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಪವರ್ ಕಟ್ ಇರಲಿದೆ. ಹೀಗಾಗಿ ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.