ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ನಾಳೆ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಭಾನುವಾರ ಬೆಳಗ್ಗೆ ಬೆಳಗ್ಗೆ 10ಯಿಂದ ಮಧ್ಯಾಹ್ನ 03:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ಬಳಿಯ ಇಸ್ರೋದಲ್ಲೂ ಕೂಡ ವಿದ್ಯುತ್ ಪೂರೈಕೆಯಲ್ಲಿ ಸ್ಥಗಿತ ಉಂಟಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಲ್ಲೆಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ?
ರಾಜಧಾನಿ ಬೆಂಗಳೂರಿನ ಯಾವ ಪ್ರದೇಶಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಲಿದೆ ಅಂತ ನೋಡುವುದಾದರೆ, ಎಸ್ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ – ಪೊಲೀಸ್ ಠಾಣೆ ರಸ್ತೆಯಲ್ಲಿ ವಿದ್ಯುತ್ ವ್ಯತ್ಯಾಸ ಉಂಟಾಗಲಿದೆ.
ಇಷ್ಟೇ ಅಲ್ಲದೇ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್ ನಲ್ಲೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸ ಕಂಡು ಬರಲಿದೆ.
ಇನ್ನು, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4 ನೇ ಹಂತ, 4 ನೇ ಮುಖ್ಯ, 8 ನೇ ಅಡ್ಡ ಮತ್ತು ಸುತ್ತಮುತ್ತಲಿನ ಪ್ರದೇಶದಲ್ಲಿ ಪವರ್ ಕಟ್ ಎದುರಾಗಲಿದೆ