ಮೈಸೂರು: ನಾನು 2029ರ ವರೆಗೆ ಮಾತ್ರ ರಾಜಕೀಯ ಯೋಚನೆ ಮಾಡುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಅವರ ಕೈ ಕೆಳಗೆ ಕೆಲಸ ಮಾಡಲು ನನಗೆ ಇಷ್ಟ. ಅವರೇ ನನ್ನ ಪಾಲಿನ ದೇವರು ಎಂದು ಸಂಸದ ಪ್ರತಾಪ್ ಸಿಂಹ ಹೇಳಿಕೊಂಡಿದ್ದಾರೆ.
ರಾಜ್ಯ ರಾಜಕಾರಣಕ್ಕೆ ಪ್ರತಾಪ್ ಸಿಂಹ ಬರುತ್ತಾರೆ ಎಂಬ ಚರ್ಚೆಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿ 15 ವರ್ಷದಲ್ಲಿ ಒಬ್ಬ ಸಂಸದನಾಗಿ ಎಷ್ಟು ಕೆಲಸ ಮಾಡಬಹುದು ಅದನ್ನು ಮಾಡುತ್ತೇನೆ.
ನಾನು ಲಾಂಗ್ ಟರ್ಮ್ ರಾಜಕಾರಣದ ಬಗ್ಗೆ ಯೋಚನೆ ಮಾಡಿಲ್ಲ. ಮುಂದೆ ರಾಜಕಾರಣದಲ್ಲಿ ಇರಬೇಕಾ? ಬೇಡವಾ? ಅಂತ ಯೋಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ
ಮಾಜಿ ಸಿಎಂ ಬಿಎಸ್ವೈ ಚುನಾವಣ ರಾಜಕೀಯದಿಂದ ನಿವೃತ್ತಿ ಹೇಳಿಕೆ ವಿಚಾರವಾಗಿ ಮಾತನಾಡುತ್ತಾ, ಸಿದ್ದರಾಮಯ್ಯ ಹಾಗೂ ಉಳಿದವರ ರಾಜಕಾರಣವನ್ನೆಲ್ಲ ಮುಗಿಸುವರೆಗೂ ಯಡಿಯೂರಪ್ಪ ಸಕ್ರಿಯಾ ರಾಜಕಾರಣದಲ್ಲಿ ಇರುತ್ತಾರೆ. ಸಕ್ರಿಯ ರಾಜಕಾರಣದಲ್ಲಿದ್ದುಕೊಂಡು ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರುತ್ತಾರೆ ಎಂದು ಪ್ರತಾಪ್ ಸಿಂಹ ಹೇಳಿದರು.