‘ಲಕ್ಷ್ಮಿ ನಿವಾಸ’ ಧಾರವಾಹಿ ಮೂಲಕ ಖ್ಯಾತಿ ಘಳಿಸಿರುವ ನಟಿ ಚಂದನಾ ಅನಂತಕೃಷ್ಣ ಬೆಂಗಳೂರಿನಲ್ಲಿ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಚಿಕ್ಕ ಮಗಳೂರು ಮೂಲದ ಸದ್ಯ ಬೆಂಗಳೂರಿನಲ್ಲಿ ವಾಸವಾಗಿರುವ ಉದ್ಯಮಿ ಪ್ರತ್ಯಕ್ಷ್ ಜೊತೆ ಹಸೆಮಣೆ ಏರಿದ್ದಾರೆ. ಮದುವೆ ಸಂಭ್ರಮದಲ್ಲಿ ಕಿರುತೆರೆಯ ಕಲಾವಿದರು ಭಾಗಿಯಾಗಿ ನವ ಜೋಡಿಗೆ ಶುಭಹಾರೈಸಿದ್ದಾರೆ.
ಗುರುಹಿರಿಯರು ನಿಶ್ಚಿಯಿಸಿದ ಹುಡುಗನ ಜೊತೆ ಚಂದನ ಸಪ್ತಪದಿ ತುಳಿದಿದ್ದಾರೆ. ಇತ್ತೀಚೆಗೆ ಕುಟುಂಬಸ್ಥರು ಸಮ್ಮುಖದಲ್ಲಿ ಸರಳವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಜೋಡಿ ಇದೀಗ ವಬೆಂಗಳೂರಿನಲ್ಲಿ ಅದ್ಧೂರಿಯಾಗಿ ಮದುವೆ ಮಾಡಿಕೊಂಡಿದ್ದಾರೆ.
ಚಂದನ ಕೈ ಹಿಡಿದಿರುವ ಪ್ರತ್ಯಕ್ಷ ಮೂಲತಃ ಚಿಕ್ಕಮಗಳೂರಿನವರಾಗಿದ್ದು Mtech ವಿದ್ಯಾಭ್ಯಾಸ ಮಾಡಿದ್ದಾರೆ. ಸದ್ಯ ಬೆಂಗಳೂರಿನಲ್ಲೇ ಸ್ವಂತ ಉದ್ಯಮ ಹೊಂದಿದ್ದು ಪ್ರತ್ಯಕ್ಷ್ ಅವರದ್ದು ಸಿನಿಮಾ ಹಿನ್ನೆಲೆ ಇರುವ ಕುಟುಂಬವಾಗಿದೆ. ಪ್ರತ್ಯಕ್ಷ ತಂದೆ ನಟ ದಿವಂಗತ ಉದಯ್ ಹುತ್ತಿನಗದ್ದೆ ಹಾಗೂ ತಾಯಿ ಲಲಿತಾಂಜಲಿ ಉದಯ್. ಕಿನ್ನರಿ, ಒಲವಿನ ನಿಲ್ದಾಣ ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ಅಭಿನಯಿಸಿದ್ದಾರೆ ಲಲಿತಾಂಜಲಿ.
ಪ್ರತ್ಯಕ್ಷ್ ತಂದೆ ಉದಯ್ ಡಾ.ರಾಜ್ ಕುಮಾರ್ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ದೇವತಾ ಮನುಷ್ಯ ಚಿತ್ರದಲ್ಲಿ ನಟಿಸಿದ್ದ ನಟ ಉದಯ್ ಹುತ್ತಿನಗದ್ದೆ ಅವರು ‘ಆರಂಭ’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ‘ಅಗ್ನಿಪರ್ವ’, ‘ಶುಭ ಮಿಲನ’ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಸದ್ಯ ಹೊಸ ಜೀವನ ಆರಂಭಿಸಿರುವ ನಟ ಜೋಡಿಗೆ ಸಾಕಷ್ಟು ಮಂದಿ ಶುಭ ಹಾರೈಸಿದ್ದಾರೆ.