ಬೆಂಗಳೂರು: ನಟ ದರ್ಶನ್ ಮನೆ ನಾಯಿ ಮಹಿಳೆಗೆ ಕಚ್ಚಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿ ದರ್ಶನ್ಗೆ ನೋಟಿಸ್ ನೀಡಲು ಆರ್.ಆರ್.ನಗರ ಪೊಲೀಸರು ಸಿದ್ಧತೆ ಮಾಡಿಕೊಂಡಿದ್ದಾರೆ.ಈಗಾಗಲೇ ಪೊಲೀಸರು ದರ್ಶನ್ ಅವರ ಮನೆಯಲ್ಲಿನ ವ್ಯಕ್ತಿಯ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ನಟ ದರ್ಶನ್ ಪ್ರಕರಣದ ಎರಡನೇ ಆರೋಪಿಯಾಗಿರುವ ಹಿನ್ನೆಲೆ ವಿಚಾರಣೆಗೆ ಹಾಜರಾಗಲು ನೋಟಿಸ್ ನೀಡಲಿದ್ದಾರೆ.
ಸಿಎಂ ಕಾವೇರಿ ನಿವಾಸದಲ್ಲಿ ಇಂದು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ಫಾಸ್ಟ್ ಮೀಟಿಂಗ್ ಆಯೋಜಿಸಿದ್ದಾರೆ. ಕೆಲವೇ ಹೊತ್ತಿನಲ್ಲಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ಫಾಸ್ಟ್ ಮಾಡಲಿದ್ದಾರೆ. ಪ್ರಸಕ್ತ ರಾಜಕೀಯ ಬೆಳವಣಿಗೆ, ಲೋಕಸಭಾ ಚುನಾವಣೆ ಬಗ್ಗೆ ಉಪಾಹಾರ ಕೂಟದಲ್ಲಿ ಚರ್ಚಿಸಲಿದ್ದಾರೆ. ಮೊದಲ ಹಂತದಲ್ಲಿ 15 ಸಚಿವರಿಗೆ ಆಹ್ವಾನ ನೀಡಲಾಗಿದೆ.