ಬೆಂಗಳೂರು: ಇಂದು ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿ ಬಳಿಯ ಸತ್ಯಸಾಯಿ ಗ್ರಾಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಲಿದ್ದು ಖಾಸಗಿ ವಿವಿ ಘಟಿಕೋತ್ಸದಲ್ಲಿ ಭಾಗಿಯಾಗಲಿದ್ದಾರೆ. ಅವರು ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿ ಅ ನಂತರ ಚಿಕ್ಕಬಳ್ಳಾಪುರಕ್ಕೆ ತೆರಳಲಿದ್ದಾರೆ.
ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯ ಪ್ರವಾಸಕ್ಕಾಗಿ ಬೆಂಗಳೂರಿಗೆ ಆಗಮಿಸಿದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಸಚಿವ ಕೆ.ಜೆ. ಜಾರ್ಜ್ ಉಪಸ್ಥಿತರಿದ್ದರು.