ಬೆಂಗಳೂರು: ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಗಳಿಗೆ ದೂರು ನೀಡುಲು ಅವಕಾಶ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಶನ್ಗೆ ಅನುಮತಿ ಕೊಟ್ಟಿರುವುದು ಸಂವಿಧಾನ ಬಾಹಿರ.
ರಾಜಭವನ ದರ್ಬಳಕೆ ಆಗಿದೆ. ರಾಜ್ಯಪಾಲರ ನಡೆಯನ್ನು ಕ್ಯಾಬಿನೆಟ್ನಲ್ಲಿ ಖಂಡಿಸಿದ್ದೇವೆ. ಕೋರ್ಟ್ನಲ್ಲೂ ಚಾಲೆಂಜ್ ಮಾಡಿದ್ದೇವೆ ಎಂದರು
ಡಿಸಿಎಂ ಹಾಗೂ ಕೆಲವು ಸಚಿವರು ನಿನ್ನೆ ದೆಹಲಿಗೆ ಹೋಗಿದ್ದೆವು. ರಾಜ್ಯದ ರಾಜಕೀಯ ಬೆಳವಣಿಗೆಯನ್ನು ಹೈಕಮಾಂಡ್ ಗಮನಕ್ಕೆ ತಂದಿದ್ದೇವೆ. ಮುಡಾ ಪ್ರಕರಣದ ಬಗ್ಗೆ ಚರ್ಚೆ ಮಾಡಿದ್ದೇವೆ. ಕೋರ್ಟ್ನಲ್ಲಿ ರಾಜ್ಯಪಾಲರ ಆದೇಶ ಪ್ರಶ್ನಿಸಿ ಅರ್ಜಿ ಹಾಕಲಾಗಿದೆ. ಆ. 29 ತಾರೀಖಿಗೆ ವಿಚಾರಣೆ ಮುಂದೂಡಲಾಗಿದೆ. ಜೊತೆಗೆ ಕಾನೂನು ಹೋರಾಟ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿರುವುದಾಗಿ ತಿಳಿಸಿದರು.
ಇದೇ ವೇಳೆ ರಾಜ್ಯಪಾಲರು ಬಿಲ್ಗಳನ್ನು ವಾಪಸ್ ಕಳುಹಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಕ್ಯಾಬಿನೆಟ್ನಲ್ಲಿ ಮಾಡುತ್ತೇವೆ. ಅವು ಸದನದಲ್ಲಿ ಪಾಸ್ ಆಗಿರುವ ಬಿಲ್ಗಳು. ವಿವರಣೆ ಕೇಳಿದರೆ ಕೊಡುತ್ತಿದ್ದೆವು. ಆದರೆ ವಾಪಸ್ ಕಳುಹಿಸಿದ್ದಾರೆ. ಕ್ಯಾಬಿನೆಟ್ನಲ್ಲಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆಂದು ಹೇಳಿದರು