ನವದೆಹಲಿ: ಕೇಂದ್ರ ಸಚಿವ ರಾವ್ ಇಂದರ್ಜಿತ್ ಅವರು ಸಂಸತ್ತಿಗೆ ಆಗಮಿಸಿದ್ದು, ಈ ಬಜೆಟ್ ಪ್ರಗತಿಪರವಾಗಿದ್ದು, ದೇಶದ ಅಭಿವೃದ್ಧಿಗಾಗಿಯೇ ಎಂದು ಹೇಳಿದ್ದಾರೆ. ಇನ್ನೂ ವೇಳೆ ನಿರ್ಮಲಾ ಸೀತಾರಾಮನ್ʼಗೆ ರಾಷ್ಟ್ರಪತಿ ಮುರ್ಮು ಸಿಹಿ ತಿನ್ನಿಸಿದ್ದಾರೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಹಣಕಾಸು ಸಚಿವರಾಗಿ ಸೀತಾರಾಮನ್ ಮಂಡಿಸಲಿರುವ 6ನೇ ಬಜೆಟ್ ಇದಾಗಿದೆ. ಹಾಗೆಯೇ ಪ್ರಧಾನಿ ಮೋದಿ ಸರ್ಕಾರದ 2ನೇ ಅವಧಿಯ ಕೊನೆಯ ಬಜೆಟ್ ಕೂಡ ಇದಾಗಿರಲಿದೆ.
ಲೋಕಸಭೆ ಚುನಾವಣೆಯ ನಂತರ ಸರ್ಕಾರ ರಚನೆಯಾಗುವವರೆಗೆ ಮಧ್ಯಂತರ ಬಜೆಟ್ಮಧ್ಯಂತರ ಅವಧಿಯ ಹಣಕಾಸಿನ ಅಗತ್ಯಗಳನ್ನು ನೋಡಿಕೊಳ್ಳುತ್ತದೆ. ಹೊಸ ಸರ್ಕಾರದಿಂದ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಾಗುವುದು.