ಅಯೋಧ್ಯೆ: ವಿವಿಧ ಕಾರ್ಯಕ್ರಮಗಳಿಗಾಗಿ ಪ್ರಧಾನಿ ಮೋದಿ ಅವರು ರಾಮನೂರು ಅಯೋಧ್ಯೆಗೆ ಆಗಮಿಸಿದ್ದಾರೆ. ನೂತನ ವಿಮಾನ ನಿಲ್ದಾಣ ಹಾಗೂ ಅಭಿವೃದ್ಧಿಪಡಿಸಿದ ರೈಲ್ವೆ ನಿಲ್ದಾಣ ಉದ್ಘಾಟನೆ ನೆರವೇರಿಸುವುದಕ್ಕೂ ಮುನ್ನ ಸುಮಾರು 15 ಕಿಮೀ ರೋಡ್ ಶೋ ಹಮ್ಮಿಕೊಂಡಿದ್ದು, ಈಗಾಗಲೇ ರೋಡ್ ಶೋ ಆರಂಭಿಸಿದ್ದಾರೆ.
ದೆಹಲಿಯಿಂದ ವಿಶೇಷ ವಿಮಾನದಲ್ಲಿ 10.45ರ ಸುಮಾರಿಗೆ ಅವರು ಅಯೋಧ್ಯೆ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಲುಹೊದಿಸಿ ಪ್ರಧಾನ ಮಂತ್ರಿಯನ್ನು ಸ್ವಾಗತಿಸಿದರು. ರೋಡ್ ಶೋ ನಂತರ ರೈಲ್ವೆ ನಿಲ್ದಾಣ ಉದ್ಘಾಟಿಸಲಿದ್ದಾರೆ.