ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು 51,000ಕ್ಕೂ ಹೆಚ್ಚು ಜನರಿಗೆ ರೋಜ್ಗಾರ್ ಮೇಳದಡಿಯಲ್ಲಿ (Rozgar Mela) ಸರ್ಕಾರಿ ಉದ್ಯೋಗ ನೇಮಕಾತಿ ಪತ್ರವನ್ನು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ವಿತರಿಸಿದ್ದಾರೆ. ದೇಶಾದ್ಯಂತ 45 ಸ್ಥಳಗಳಲ್ಲಿ ರೋಜ್ಗಾರ್ ಮೇಳ ನಡೆಯಲಿದೆ ಎಂದು ಪ್ರಧಾನಮಂತ್ರಿಗಳ ಕಚೇರಿ ತಿಳಿಸಿದೆ. ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, ಅರೆಸೇನಾ ಪಡೆಗಳಲ್ಲಿನ ನೇಮಕಾತಿ ಪ್ರಕ್ರಿಯೆಯನ್ನು ಸರಳೀಕರಿಸಲಾಗಿದ್ದು,
ನೇಮಕಾತಿಯ ಸಮಯವನ್ನು ಕಡಿಮೆಗೊಳಿಸಲಾಗಿದೆ ಎಂದು ಅವರು ಹೇಳಿದರು. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ನಮ್ಮ ಬದ್ಧತೆಯನ್ನು ಈಡೇರಿಸುವ ನಿಟ್ಟಿನಲ್ಲಿ ರೋಜ್ಗರ್ ಮೇಳ ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಹೇಳಿದ್ದಾರೆ. ಭಾರತ ಸರ್ಕಾರ ಮತ್ತು ಕೆಲವು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ದೇಶಾದ್ಯಂತ ರೋಜ್ಗಾರ್ ಮೇಳಗಳನ್ನು ಆಯೋಜಿಸುತ್ತಿವೆ ಮತ್ತು ಪ್ರತಿ ತಿಂಗಳು ಲಕ್ಷಗಟ್ಟಲೆ ಯುವಕರಿಗೆ ನೇಮಕಾತಿ ಪತ್ರಗಳನ್ನು ವಿತರಿಸುತ್ತಿವೆ ಎಂದು ಹೇಳಿದರು.
ರೋಜ್ಗಾರ್ ಮೇಳದ (ಉದ್ಯೋಗ ಮೇಳ)ಮೂಲಕ ಗೃಹ ವ್ಯವಹಾರಗಳ ಸಚಿವಾಲಯವು (MHA) ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF), ಗಡಿ ಭದ್ರತಾ ಪಡೆ (BSF), ಶಾಸ್ತ್ರ ಸೀಮಾ ಬಾಲ್ (SSB) ನಂತಹ ವಿವಿಧ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳಲ್ಲಿ (CAPFs) ಸಿಬ್ಬಂದಿಯನ್ನು ಹಾಗೂ ಅಸ್ಸಾಂ ರೈಫಲ್ಸ್, ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (CISF), ಇಂಡೋ ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP)ಗಳಿಗೆ ನೇಮಕಾ ಮಾಡಲಾಗಿದೆ.