ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಮೂರು ದೇಶಗಳಾದ ಜಪಾನ್, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾಕ್ಕೆ ಇದೇ ತಿಂಗಳ 19 ರಿಂದ 24 ರವರೆಗೆ ಪ್ರವಾಸ ಕೈಗೊಳ್ಳಲಿದ್ದಾರೆ. ಗ್ರೂಪ್ ಆಫ್ ಸೆವೆನ್ ಜಿ – 7 ಮತ್ತು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕ್ವಾಡ್ ಸೇರಿದಂತೆ ಮೂರು ಪ್ರಮುಖ ಬಹುಪಕ್ಷೀಯ ಶೃಂಗಸಭೆಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್, ಪಪುವಾ ನ್ಯೂಗಿನಿಯಾ ಮತ್ತು ಆಸ್ಟ್ರೇಲಿಯಾಕ್ಕೆ ಆರು ದಿನಗಳ ಪ್ರವಾಸವನ್ನು ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಜಪಾನ್ ಅಧ್ಯಕ್ಷ ಕಿಶಿದಾ ಅವರ ಆಹ್ವಾನದ ಮೇರೆಗೆ ಪ್ರಧಾನಿ ಆ ದೇಶಕ್ಕೆ ಪ್ರಯಾಣಿಸುತ್ತಿದ್ದು, ತಮ್ಮ ಪ್ರವಾಸದ ಮೊದಲ ಹಂತದಲ್ಲಿ, ಪ್ರಧಾನಿ ಅವರು ಮೇ 19 ರಿಂದ 21 ರವರೆಗೆ ಜಪಾನಿನ ನಗರವಾದ ಹಿರೋಷಿಮಾಕ್ಕೆ ಭೇಟಿ ನೀಡಲಿದ್ದು, ಜಿ-7 ಮುಂದುವರಿದ ಆರ್ಥಿಕತೆಗಳ ವಾರ್ಷಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ. ಈ ಸಭೆಯಲ್ಲಿ ಆಹಾರ, ರಸಗೊಬ್ಬರ ಮತ್ತು ಇಂಧನ ಭದ್ರತೆ ಸೇರಿದಂತೆ ಜಾಗತಿಕವಾಗಿ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಮಾತನಾಡುವ ನಿರೀಕ್ಷೆಯಿದೆ ಎಂದು ತಿಳಿಸಿದೆ.