ನವದೆಹಲಿ: ವಿದೇಶ ಪ್ರವಾಸ ಮುಗಿಸಿ ವಾಪಸ್ಸಾದ ಪ್ರಧಾನಿ ನರೇಂದ್ರ ಮೋದಿ (Narendra Modi) ಸೋಮವಾರ ದೆಹಲಿಯಲ್ಲಿ ಮಹತ್ವದ ಸಭೆ ನಡೆಸಿದರು. ಹಿರಿಯ ಸಚಿವರು ಮತ್ತು ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಅವರು ಮಣಿಪುರ (Manipura) ದ ಪರಿಸ್ಥಿತಿ ಸೇರಿದಂತೆ ಪ್ರಮುಖ ವಿದ್ಯಮಾನಗಳ ಮಾಹಿತಿ ಪಡೆದುಕೊಂಡರು. ಸಭೆಯಲ್ಲಿ ಗೃಹ ಸಚಿವ ಅಮಿತ್ ಶಾ (AmitShah), ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitaraman),
ನಗರಾಭಿವೃದ್ಧಿ ಸಚಿವ ಹರ್ದೀಪ್ ಪುರಿ, ಪ್ರಧಾನಮಂತ್ರಿ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ (PK Mishra) ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಇದಕ್ಕೂ ಮುನ್ನ ಪ್ರತ್ಯೇಕವಾಗಿ ಪ್ರಧಾನಿ ನರೇಂದ್ರ ಮೋದಿ ಭೇಟಿಯಾದ ಅಮಿತ್ ಶಾ, ಮಣಿಪುರದ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿದ್ದರು. ಈ ವೇಳೆ ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ (Biren Singh) ಉಪಸ್ಥಿತರಿದ್ದರು. ಹಿಂಸಾಚಾರವನ್ನು ನಿಯಂತ್ರಿಸಲು ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಸಮರ್ಥವಾಗಿವೆ ಎಂದು ತಿಳಿಸಿದ್ದಾರೆ.