ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ದೋಸ್ತಿಗಳು ಮೈಸೂರು ಚಲೋ ಆರಂಭಿಸಿದ್ದಾರೆ.
ಬೆಂಗಳೂರಿನ ಕೆಂಗೇರಿ ಬಳಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಪಾದಯಾತ್ರೆಗೆ ಚಾಲನೆ ನೀಡಿದರು. ಪಾದಯಾತ್ರೆ ಉದ್ಘಟನಾ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಕಾಣಸಿಕೊಂಡಿಲ್ಲ. ಈ ಮೂಲಕ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಅವರ ಷರತ್ತನ್ನು ಬಿಜೆಪಿ ಪಾಲಿಸಿದೆ.
ಪಾದಯಾತ್ರೆಗೆ ಪೂರ್ವ ಸಿದ್ಧತೆ ಸಭೆಗೆ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಆಹ್ವನಿಸಲಾಗಿತ್ತು. ಈ ಸಭೆಯಲ್ಲಿ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಕೂಡ ಭಾಗಿಯಾಗಿದ್ದರು. ಅಲ್ಲದೆ, ಪಾದಯಾತ್ರೆ ಕೂಡ ಪ್ರೀತಂ ಗೌಡ ನೇತೃತ್ವದಲ್ಲೇ ನಡೆಯಲಿದೆ ಎಂಬ ಮಾತುಗಳು ಕೇಳಿ ಬಂದಿದ್ದವು. ಈ ಸಮಯದಲ್ಲೇ ಅಪಸ್ವರ ಕೇಳಿಬಂದಿತ್ತು. ಜೆಡಿಎಸ್ ನಾಯಕರು ಪಾದಯಾತ್ರೆಗೆ ಬೆಂಬಲ ಸೂಚಿಸುವುದಿಲ್ಲ ಎಂದು ಹೇಳಿದ್ದರು.