ಹಾವೇರಿ:- ಇಲ್ಲಿನ ವರದಾಹಳ್ಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿ 15ಕ್ಕೂ ಹೆಚ್ಚು ಜನರಿಗೆ ಸಣ್ಣಪುಟ್ಟ ಗಾಯಗಳಾದ ಘಟನೆ ಜರುಗಿದೆ.
ಎಲ್ಲ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹಾವೇರಿ ತಾಲ್ಲೂಕಿನ ವರದಾಹಳ್ಳಿ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದೆ. ಬಸ್ ಸರ್ವೀಸ್ ರಸ್ತೆಗೆ ಪಲ್ಟಿಯಾಗಿದೆ. ಬಸ್ ಬೆಂಗಳೂರಿನಿಂದ ಗೋವಾಕ್ಕೆ ತೆರಳುತ್ತಿತ್ತು ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಹಾವೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.