ಬೆಂಗಳೂರು : SSLC ಪರೀಕ್ಷೆ ಪ್ರಾರಂಭಕ್ಕೂ ಮುನ್ನವೇ ಶಿಕ್ಷಣ ಇಲಾಖೆಗೆ ಹೊಸ ತಲೆನೋವು ಶುರುವಾಗಿದ್ದು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಖಾಸಗಿ ಶಾಲಾ ಶಿಕ್ಷಕರು
ಖಾಸಗಿ ಶಾಲಾ ಶಿಕ್ಷಕರನ್ನ ಪರೀಕ್ಷಾ ಮೇಲ್ವಿಚಾರಕರಾಗಿ ನೇಮಕ ಮಾಡದ ಹಿನ್ನೆಲೆ ಕೇವಲ ಸರ್ಕಾರಿ ಹಾಗೂ ಅನುದಾನಿತ ಶಾಲಾ ಶಿಕ್ಷಕರನ್ನ ಪರೀಕ್ಷಾ ಮೇಲ್ವಿಚಾರಕರಾಗಿ ನೇಮಕ ಮಾಡಲಾಗಿದೆ. ಹೀಗಾಗಿ ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಖಾಸಗಿ ಶಾಲಾ ಶಿಕ್ಷಕರು
ಪರೀಕ್ಷಾ ಮೇಲ್ವಿಚಾರಕರಾಗಿ ನಮ್ಮನ್ನ ಪರಿಗಣಿಸುವಂತೆ ಖಾಸಗಿ ಶಾಲಾ ಒಕ್ಕೂಟ ರುಪ್ಸಾ ಮನವಿ ಮಾಡಿದ್ರೂ ಪರೀಕ್ಷಾ ಕೆಲಸದಿಂದ ದೂರ ಉಳಿಯುವುದಾಗಿ ಎಚ್ಚರಿಕೆ ನೀಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ವಿರೋಧ ವ್ಯಕ್ತಪಡಿಸಿದ್ದಾರೆ
ಸರ್ಕಾರಿ ಖಾಸಗಿ ಅಂತ ಬೇಧ ಭಾವ ಮಾಡ್ತಿದೆ ಶಿಕ್ಷಣ ಇಲಾಖೆ ಈ ಕೂಡಲೇ ಪರೀಕ್ಷಾ ಮೇಲ್ವಿಚಾರಕರಾಗಿ ಖಾಸಗಿ ಶಾಲಾ ಶಿಕ್ಷಕರನ್ನ ನೇಮಕ ಮಾಡುವಂತೆ ಒತ್ತಾಯ ಶಿಕ್ಷಣ ಇಲಾಖೆಗೆ ಒತ್ತಾಯ ಮಾಡಿದ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ