ಬೆಂಗಳೂರು: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪ್ರೊ.ಎಂ.ವಿ.ರಾಜೀವ್ ಗೌಡ, ಬಿಜೆಪಿ ಅಭ್ಯರ್ಥಿಯಂತೆ ಚಿಕ್ಕಮಂಗಳೂರಿನಿಂದ ವಲಸೆ ಬಂದವರಲ್ಲ. ಇದೇ ಬೆಂಗಳೂರಿನಲ್ಲಿಯೇ ಹುಟ್ಟಿ ಬೆಳೆದು, ಇಲ್ಲಿನ ಜನಗಳ ನಾಡಿಮಿಡಿತ ಬಲ್ಲವರಾಗಿದ್ದಾರೆ. ಅವರ ತಂದೆ ಮತ್ತು ದೊಡ್ಡಪ್ಪ ಕೂಡ ಇಲ್ಲಿನ ಹೈನುಗಾರಿಕೆ ಮತ್ತು ರೇಷ್ಮೆ ಬೆಳೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲಕುಂಟೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷ ಆಯೋಜಿಸಿದ್ದ ಚುನಾವಣಾ ರೋಡ್ ಶೋ ಉದ್ದೇಶಿಸಿ ಡಿ.ಕೆ.ಶಿವಕುಮಾರ್ ಮಾತನಾಡಿದರು. ಇದಕ್ಕೂ ಮುನ್ನ ಬಾಗಲಗುಂಟೆ ಗ್ರಾಮ ದೇವತೆ ಮಾರಮ್ಮ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಡಿ.ಕೆ.ಶಿವಕುಮಾರ್ ರವರಿಗೆ ಕಾಂಗ್ರೆಸ್ ಅಭ್ಯರ್ಥಿ ಪ್ರೊ.ಎಂ.ವಿ.ರಾಜೀವ್ ಗೌಡ ಸೇರಿದಂತೆ ಅಪಾರ ಪ್ರಮಾಣದ ಕಾಂಗ್ರೆಸ್ ಕಾರ್ಯಕರ್ತರು ಸಾಥ್ ನೀಡಿದರು.
ಕಳೆದ ವಿಧಾನಸಭಾ ಚುನಾವಣೆಗೂ ಮುಂಚೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ಘೋಷಿಸಿರುವಂತೆ ಐದು ಮಹತ್ವದ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೆ ತಂದಿದೆ. ಕಳೆದ 10 ತಿಂಗಳ ಅವಧಿಯಲ್ಲಿ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಆರ್ಥಿಕ ಪರಿಸ್ಥಿತಿ ತಕ್ಕ ಮಟ್ಟಿಗೆ ಸುಧಾರಿಸಿದೆ. ಅದರಂತೆ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ದೇಶಾದ್ಯಂತ ಕಡುಬಡತನದ ಕುಟುಂಬಗಳಿಗೆ ತಲಾ 1 ಲಕ್ಷ ನೀಡುತ್ತೇವೆ ಎಂದು ಈಗಾಗಲೇ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿಯವರು ಘೋಷಿಸಿದ್ದಾರೆ. ಅದರೊಟ್ಟಿಗೆ ಯುವಕರಿಗಾಗಿ ಯುವ ನ್ಯಾಯ್, ಮಹಿಳೆಯರಿಗಾಗಿ ನಾರಿ ನ್ಯಾಯ್’, ರೈತರಿಗಾಗಿ ಕಿಸಾನ್ ನ್ಯಾಯ್, ಕಾರ್ಮಿಕರಿಗಾಗಿ ಶ್ರಮಿಕ್ ನ್ಯಾಯ್ ಮೂಲಕ ಐದು ಪ್ರಮುಖ ಗ್ಯಾರಂಟಿ ಯೋಜನೆ ಜಾರಿಗೊಳಿಸಲು ಕೂಡ ತೀರ್ಮಾನಿಸಲಾಗಿದೆ. ಪರಿಣಾಮವಾಗಿ ನಮ್ಮ ಐದು ಗ್ಯಾರಂಟಿಗಳ ಜೊತೆಗೆ ರಾಹುಲ್ ಗಾಂಧಿಯವರ ಗ್ಯಾರಂಟಿ ಯೋಜನೆಗಳು ಕೂಡ
ಈ ಸಂಧರ್ಭದಲ್ಲಿ ಮಾಜಿ ಶಾಸಕ ಮಂಜುನಾಥ್ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ವಾಜೀದ್, ಕಾಂಗ್ರೆಸ್ ಮುಖಂಡೆ ಅಕೈ ಪದ್ಮಸಾಲಿ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಮುಖಂಡರು ಮತ್ತು ಸಹಸ್ರಾರು ಕಾರ್ಯಕರ್ತರು ಉಪಸ್ಥಿತರಿದ್ದರು.