ಪತ್ನಿಯ ಆಸ್ತಿ ವಿವರ ಮರೆ ಮಾಚಿದ ಆರೋಪದಡಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ಸಿದ್ಧರಾಮಯ್ಯವಿರುದ್ಧ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ.
12 ವರ್ಷಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯ ಅಫಿಡವಿಟ್ನಲ್ಲಿ ಮಾಹಿತಿ ಮುಚ್ಚಿಟ್ಟಿದ್ದಾರೆ. ಪತ್ನಿ ಪಾರ್ವತಿ ಹೆಸರಿನಲ್ಲಿದ್ದ 3 ಎಕ್ರೆ 16 ಗುಂಟೆ ಕೃಷಿ ಭೂಮಿಯ ವಿವರವನ್ನು ಬಹಿರಂಗ ಪಡಿಸಿಲ್ಲ ಎಂದು ಆರೋಪಿಸಿ ದೂರು ನೀಡಿದ್ದಾರೆ. ಅಲ್ಲದೇ ಕೂಡಲೇ ಕ್ರಮ ಕೈಗೊಳ್ಳುವಂತೆ ಒತ್ತಾಯ ಮಾಡಿದ್ದಾರೆ.