ಬೆಂಗಳೂರು: ತಮ್ಮ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಖಂಡಿಸಿ ಬಿಜೆಪಿ ಇಂದು ರಾಜಧಾನಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದೆ. ಗಾಂಧಿನಗರದ ಬಿನ್ನಿಪೇಟೆಯಲ್ಲಿ ಬಿಜೆಪಿ(BJP) ನಾಯಕರಿಂದ ಪ್ರತಿಭಟನೆ ನಡೆದಿದೆ. ಕಳೆದ ಕೆಲದಿನಗಳ ಹಿಂದೆ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾಗಿತ್ತು. ಕಾಂಗ್ರೆಸ್ ಪಕ್ಷದವರೇ ಹಲ್ಲೆ ಮಾಡಿದ್ದಾರೆಂದು ಆರೋಪಿಸಲಾಗಿತ್ತು.
ಹೀಗಾಗಿ ಈ ಹಲ್ಲೆ ಖಂಡಿಸಿ ಇಂದು ಬಿಜೆಪಿ ಅಭ್ಯರ್ಥಿ ಸಪ್ತಗಿರಿ ಗೌಡ ನೇತೃತ್ವದಲ್ಲಿ ಪ್ರತಿಭಟನೆ ಜರುಗಿದೆ. ಈ ವೇಳೆ ಸಪ್ತಗಿರಿ ಗೌಡ ಅವರು ಕಾಂಗ್ರೆಸ್ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು. ಇನ್ನೂ ಮೌನ ಮೆರವಣಿಗೆ ಮೂಲಕ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಯುವಮೋರ್ಚಾ ಕಾರ್ಯಕರ್ತರು, ಅಧಿಕಾರಿಗಳು, ಮುಖಂಡರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.