ಧಾರವಾಡ : “ಪಶ್ಚಿಮ ಘಟ್ಟ ಪರಿಸರ ಪರಿಣಿತರ ಸಮಿತಿಯ ವರದಿ” ಯನ್ನು ಜಾರಿಗೊಳಿಸಲು ಒತ್ತಾಯಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪರಿಸರಕ್ಕಾಗಿ ನಾವು ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ಪರಿಸರವಾದಿ ಡಾ. ಸಂಜೀವ ಕುಲಕರ್ಣಿ ನೇತೃತ್ವದಲ್ಲಿ ಧಾರವಾಡ ಕಡಪಾ ಮೈದಾನದಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ನಡೆಸಿ ಧಾರವಾಡ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಕೆ ಮಾಡಲಾಯಿತುಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ನಮ್ಮ ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನೀಡಲು ನಾವೆಲ್ಲರೂ ಜಾಗೃತಿ ವಹಿಸಬೇಕು.
ಸರ್ಕಾರ ಈ ಕುರಿತು ಗಂಭೀರವಾಗಿ ಪರಿಗಣಿಸಬೇಕು ಎಂದು ಪ್ರತಿಭಟನಾ ನಿರತ ಪರಿಸರಕ್ಕಾಗಿ ನಾವು ಸಂಘಟನೆ ಸದಸ್ಯರು ಆಗ್ರಹಿಸಿದರು.