ಸಮಾನ ವೇತನ, ಸಮಾನ ವಿದ್ಯಾರ್ಹತೆ ಹಾಗೂ ಒಂದೇ ನೇಮಕಾತಿ ವಿಧಾನವಿದ್ದರೂ ಸಹ ಶಿಕ್ಷಕರು ಹಾಗೂ ದೈಹಿಕ ಶಿಕ್ಷಕರ ಮಧ್ಯೆ ತಾರತಮ್ಯ ಧೋರಣೆ ಮಾಡಲಾಗುತ್ತಿದೆ ಎಂದು ರಾಜ್ಯ ಮಟ್ಟದ ದೈಹಿಕ ಶಿಕ್ಷಕರ ಸಂಘಟನೆ ಅಧ್ಯಕ್ಷ ಚೌಡಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರೊ.ಎಲ್.ಆರ್ ವೈದ್ಯನಾಥ್ವ ರದಿಯ ಅನ್ವಯ ದೈಹಿಕ ಶಿಕ್ಷಕರನ್ನು ಸಹ ಶಿಕ್ಷಕರಾಗಿ ಪರಿಗಣಿಸಿದ್ದರೂ, ಮುಖ್ಯ ಶಿಕ್ಷಕರ ಮುಂಬಡ್ತಿ ಸೇರಿದಂತೆ ಸಹ ಶಿಕ್ಷಕರಿಗೆ ಸಿಗುವ ಸೌಲಭ್ಯಗಳನ್ನು ಜಾರಿಗೊಳಿಸಲು ಇಲಾಖೆಯ ಅಧಿಕಾರಿಗಳು ವಿಳಂಬ ಧೋರಣೆ ಮಾಡಿರುವುದನ್ನು ಈ ಧರಣಿಯ ಮೂಲಕ ತೋರಿಸುತ್ತೇವೆ ಎಂದು ಆಗ್ರಹಿಸಿದ್ದಾರೆ.
ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಶಾಸಕರು ಮತ್ತು ಹಲವು ಸಚಿವರು ಪ್ರತಿ ಬಾರಿ ಅಧಿವೇಶನಗಳಲ್ಲಿ ಚರ್ಚೆ ಮಾಡಿದ್ದಾರೆ. ಆದೇಶಗಳನ್ನು ನೀಡಿ ಅನುಷ್ಠಾನಗೊಳಿಸುವಂತೆ ಸೂಚನೆ ನೀಡಿಸಿದ್ದಾರೆ ಆದರೆ ಇದುವರೆಗೂ ಇಲಾಖೆಯಲ್ಲಿ ಸರ್ಕಾರದ ಆದೇಶಗಳನ್ನು ಜಾರಿಗೊಳಿಸಿಲ್ಲ. ಶೀಘ್ರವಾಗಿ ನಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಮುಷ್ಕರವನ್ನು ಪ್ರಾರಂಭಿಸುತ್ತೇವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಜೆ. ಚಂದ್ರಶೇಖರ್, ಖಜಾಂಚಿ ಡಿ.ವಿ ಬಾಲರಾಜ್, ಕಾರ್ಯಾಧ್ಯಕ್ಷ ಪಿ.ಡಿ ಕಾಗೋಡ್ ಎಚ್ಚರಿಕೆ ಗಂಟೆಯನ್ನು ಬಾರಿಸಿದ್ದಾರೆ.