ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದ 11 ವರ್ಷಗಳು ಉರುಳಿಸಿದೆ. ಆದರೆ ತಪ್ಪಿತಸ್ಥರು ಇದುವರೆಗೂ ಸಿಕ್ಕಿಲ್ಲ. ಅಮಾಯಕ ಹೆಣ್ಣುಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಸೌಜನ್ಯ ಕುಟುಂಬಸ್ಥರು, ಸಂಘಟನೆಗಳು ಹೋರಾಟ ಮಾಡುತ್ತಲೇ ಇದೆ.
ಇಂದು ಸೌಜನ್ಯ ಅತ್ಯಾಚಾರ ಪ್ರಕರಣವನ್ನ ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ ಅಂತ 30 ಕ್ಕೂ ಹೆಚ್ಚು ಪ್ರಗತಿಪರ ಸಂಘಟನೆಗಳಿಂದ ನಗರದ ಫ್ರೀಡಂಪಾರ್ಕ್ ನಲ್ಲಿ ಪ್ರತಿಭಟನೆ ನಡೆಸ್ತಿದ್ದಾರೆ.
ಈ ಪ್ರಕರಣವನ್ನ ಉನ್ನತಮಟ್ಟದ ತನಿಖೆಗೆ ವಹಿಸಬೇಕು. ಯಾರನ್ನೋ ಉಳಿಸುವ ಪ್ರಯತ್ನ ಆಗಬಾರದೆಂದು ಪ್ರತಿಭಟನೆಯಲ್ಲಿ ಭಾಗಿಯಾದ ಮಹಿಳೆಯರು ಕಿಡಿಕಾರಿದ್ರು. ಇನ್ನೂ ಈ ಪ್ರತಿಭಟನೆಯಲ್ಲಿ ಸೌಜನ್ಯಳ ತಾಯಿ ಕೂಡ ಭಾಗಿಯಾಗಿ, ಮಗಳ ಸಾವಿಗೆ ನ್ಯಾಯ ಸಿಗಬೇಕೆಂದು ಭಾವುಕರಾದ್ರು.
ಅಕ್ಟೋಬರ್ 9, 2012ರಂದು ಬೆಳ್ತಂಗಡಿ ತಾಲೂಕಿನ ಉಜಿರೆ ಕಾಲೇಜಿನ ವಿದ್ಯಾರ್ಥಿನ ಕುಮಾರಿ ಸೌಜನ್ಯ ಅತ್ಯಾಚಾರಕ್ಕೀಡಾಗಿ ಕೊಲೆಯಾಗಿದ್ದಳು. ಈ ಕುರಿತು ಹಲವು ಇಲಾಖೆಗಳಿಂದ ತನಿಖೆ ನಡೆದಿತ್ತು. 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪ್ರಕರಣವನ್ನು ಸಿಬಿಐಗೆ ವಹಿಸಿತ್ತು. 2013ರಿಂದ 2023ರ ವರೆಗೆ ಸಿಬಿಐ ತನಿಖೆ ನಡೆಸಿತ್ತು. ಇತ್ತೀಚೆಗೆ ಶಂಕಿತ ಆರೋಪಿಯನ್ನು ನ್ಯಾಯಾಲಯ ದೋಷ ಮುಕ್ತಗೊಳಿಸಿತ್ತು.