ಬೆಂಗಳೂರು:- ಸಿಐಡಿ ಅಧಿಕಾರಿಗಳು ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಮೂವರನ್ನು ಅರೆಸ್ಟ್ ಮಾಡಿದೆ.
ಚಂದ್ರಕಾಂತ್, ಬಸವರಾಜ್, ಶಶಿಧರ್ ಬಂಧಿತರು. ಈ ಮೂವರು ಅಭ್ಯರ್ಥಿಗಳಿಗೆ ಬ್ಲೂಟೂತ್ ಮೂಲಕ ಉತ್ತರ ಹೇಳಿಕೊಟ್ಟಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ಪಿಎಸ್ಐ ಪರೀಕ್ಷೆ ಅಕ್ರಮ ಪ್ರಕರಣಕ್ಕೆ ಸಂಬಂಧಸಿದಂತೆ ಕಲಬುರಗಿಯ ಅಶೋಕ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು
ರಾಜ್ಯದಲ್ಲಿ ನಡೆದ 545 ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣ ಸಂಬಂಧ ತನಿಖೆಗೆ ಸರ್ಕಾರವು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ವೀರಪ್ಪ ನೇತೃತ್ವದಲ್ಲಿ ಸಮಿತಿ ರಚಿಸಿತ್ತು. ಅದರಂತೆ ತನಿಖೆ ನಡೆಸಿರುವ ಸಮಿತಿಯು ಜ.22 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತನಿಖಾ ವರದಿಯನ್ನು ನೀಡಿದೆ.
545 ಪಿಎಸ್ಐ ಹುದ್ದೆಗಳ ಭರ್ತಿಗಾಗಿ ಕಳೆದ ವರ್ಷದ ಅಕ್ಟೋಬರ್ 3 ರಂದು ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿನ 93 ಪರೀಕ್ಷಾ ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆದಿತ್ತು. ಈ ಪರೀಕ್ಷೆಯಲ್ಲಿ ಕೆಲವು ಅಭ್ಯರ್ಥಿಗಳು ಹುದ್ದೆಗಳನ್ನು ಅಕ್ರಮವಾಗಿ ಗಿಟ್ಟಿಸಿಕೊಳ್ಳಲು ಹಣ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಪರೀಕ್ಷಾ ಹಗರಣದಲ್ಲಿ ಹಣದ ಹೊಳೆಯೇ ಹರಿದಿರುವುದು ದೃಢವಾಗಿತ್ತು.
ಪ್ರಕರಣದ ಗಂಭೀರತೆಯನ್ನು ಅರಿತು ಸರ್ಕಾರ ತನಿಖೆಯನ್ನು ಸಿಐಡಿಗೆ ವಹಿಸಿತು