ಬೆಂಗಳೂರು: ಮಾರ್ಚ್ 3ರಂದು ರಾಜ್ಯಾದ್ಯಂತ 0-5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ನಿಗದಿತ ಬೂತ್, ಅಂಗನವಾಡಿ ಮುಂತಾದ ಸ್ಥಳಗಳಲ್ಲಿ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಗ್ರಾಮ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ, ನಗರ ಮಟ್ಟಗಳಲ್ಲೂ ಪೋಲಿಯೊ ಲಸಿಕೆ ಬಗ್ಗೆ ಅರಿವು ಮೂಡಿಸಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನಂತರದ ಮೂರು ದಿನ ತಂಡಗಳು ಮನೆ ಮನೆಗೆ ತೆರಳಿ ಲಸಿಕೆ ನೀಡಲಿವೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ.ಅನಿಲ್ ಕುಮಾರ್ ತಿಳಿಸಿದ್ದಾರೆ.
5 ವರ್ಷದ ಒಳಗಿನ ಮಕ್ಕಳಿಗೆ ಹಾಕುವ ಪೋಲಿಯೋ ಅಭಿಯಾನ ಯಾವಾಗ ಎಂದು ಜನರು ಗೊಂದಲಕ್ಕೆ ಒಳಗಾಗಿದ್ದರು. ಇದೀಗ ಸರ್ಕಾರ ಮುಂದಿನ ತಿಂಗಳು 03 ರಿಂದ 06 ರವರೆಗೆ ಪಲ್ಸ್ ಪೋಲಿಯೋ ಅಭಿಯಾನ ನಡೆಯಲಿದೆ ಎಂದು ಮಾಹಿತಿ ನೀಡಿದೆ.
ಈ ಅಭಿಯಾನ ಮೂರು ದಿನಗಳು ನಡೆಯಲ್ಲಿದ್ದು, ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ಜಾಗೃತಿ ಅಭಿಯಾನವನ್ನು ಬಿಬಿಎಂಪಿ ಕೈಗೊಳುತ್ತಿದೆ. ಪ್ರಾಥಮಿಕ ಚಿಕಿತ್ಸಾ ಕೇಂದ್ರ, ನಗರ ಚಿಕಿತ್ಸಾ ಕೇಂದ್ರ, ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತದೆ