ಉತ್ತರ ಕೊರಿಯಾದ ನಾಯಕ ಕಿಮ್ ಜಾಂಗ್ ಉನ್ ಅವರಿಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ದುಭಾರಿ ಕಾರೊಂದನ್ನು ಉಡುಗೊರೆಯಾಗಿ ನೀಡಿದ್ದಾರೆ.
ಕಿಮ್ ಜಾಂಗ್ ಅವರ ವೈಯಕ್ತಿಕ ಬಳಕೆಗಾಗಿ ಈ ಕಾರು ನೀಡಲಾಗಿದೆಯಂತೆ. ಉಡುಗೊರೆ ನೀಡಿರುವುದಕ್ಕೆ ಕಿಮ್ ಸಹೋದರಿ ಪುಟಿನ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ. ಜೊತೆಗೆ ಉಡುಗೊರೆಯು ಇಬ್ಬರು ಉನ್ನತ ನಾಯಕರ ನಡುವಿನ ವೈಯಕ್ತಿಕ ಸಂಬಂಧವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ. ಈ ಉಡುಗೊರೆ ವಿಶ್ವಸಂಸ್ಥೆಯ ನಿಯಮಗಳ ಉಲ್ಲಂಘನೆಯಾಗಿರಬಹುದು ಎಂದು ಹೇಳಲಾಗುತ್ತಿದೆ. ಯಾಕೆಂದರೆ ವಿಶ್ವಸಂಸ್ಥೆಯು ರಷ್ಯಾ ಮತ್ತು ಉತ್ತರ ಕೊರಿಯಾ ನಡುವಿನ ವಹಿವಾಟುಗಳನ್ನು ನಿಷೇಧಿಸಿದೆ.
ರಷ್ಯಾ ನಿರ್ಮಿತ ಕಾರನ್ನು ಫೆಬ್ರವರಿ 18 ರಂದು ಕಿಮ್ನ ಉನ್ನತ ಸಹಾಯಕರಿಗೆ ಹಸ್ತಾಂತರಿಸಲಾಗಿದೆ ಸುದ್ದಿ ಸಂಸ್ಥೆಯೊಂದು ವರಿ ಮಾಡಿದ್ದು, ಆದರೆ ಈ ಕಾರನ್ನು ರಷ್ಯಾದಿಂದ ಕಳುಹಿಸಲಾಗಿದೆ ಎಂಬುದನ್ನು ಉಲ್ಲೇಖಿಸಿಲ್ಲ. ಐಷಾರಾಮಿ ಕಾರುಗಳ ಮೇಲಿನ ಕಿಮ್ ಒಲವನ್ನು ಪರಿಗಣಿಸಿ ಪುಟಿನ್ ಈ ವಿಶೇಷ ಉಡುಗೊರೆಯನ್ನು ಕಳುಹಿಸಿದ್ದಾರೆ.