ಮಾಸ್ಕೋ: ಉಕ್ರೇನ್ನಲ್ಲಿ ಹೋರಾಡಲು ತನ್ನ ಸೈನ್ಯವನ್ನು ಕಳುಹಿಸುವ ಧೈರ್ಯಮಾಡುವ ಯಾವುದೇ ಪಾಶ್ಚಿಮಾತ್ಯ ರಾಷ್ಟ್ರಗಳು “ಅಣ್ವಸ್ತ್ರ ಬಳಕೆಯ ಪರಿಣಾಮ” ಎದುರಿಸಬೇಕಾಗುತ್ತದೆ ಎಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎಚ್ಚರಿಕೆ ನೀಡಿದ್ದಾರೆ.
ರಷ್ಯಾ ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಿದ ಅವರು, “ಪಾಶ್ಚಿಮಾತ್ಯ ದೇಶಗಳು ರಷ್ಯಾದ ಸಾಮರ್ಥ್ಯ ಕುಗ್ಗಿಸಲು ಪ್ರಯತ್ನಿಸುತ್ತಿವೆ. ಆದರೆ ರಷ್ಯಾ ವಿಚಾರದಲ್ಲಿ ಮಧ್ಯ ಪ್ರವೇಶಿಸುವುದು ಎಷ್ಟು ಅಪಾಯಕಾರಿ ಎಂಬುದನ್ನು ಆ ದೇಶಗಳು ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
ಈ ವಾರದ ಆರಂಭದಲ್ಲಿ ನ್ಯಾಟೊ ಸದಸ್ಯ ರಾಷ್ಟ್ರಗಳು ಉಕ್ರೇನ್ಗೆ ಸೇನಾಪಡೆಗಳನ್ನುಕಳುಹಿಸಬೇಕು ಎಂದು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರು ಸಲಹೆ ನೀಡಿದ್ದರು. ಮ್ಯಾಕ್ರನ್ ಅವರ ಹೇಳಿಕೆಗೆ ಪ್ರತಿಕ್ರಿಯೆಯಾಗಿ ಪುಟಿನ್ ಅವರು ಈ ಎಚ್ಚರಿಕೆ ನೀಡಿದ್ದಾರೆ ಎಂದು ದಿನಪತ್ರಿಕೆ ವರದಿ ಮಾಡಿದೆ.
ಅಮೆರಿಕ, ಜರ್ಮನಿ, ಬ್ರಿಟನ್ ಮತ್ತು ಇತರ ರಾಷ್ಟ್ರಗಳು, ಸೇನೆ ಕಳುಹಿಸುವ ಮ್ಯಾಕ್ರನ್ ಅವರ ಸಲಹೆಯನ್ನು ತಿರಸ್ಕರಿಸಿದ್ದರು.