ಚಾಮರಾಜನಗರ: ಉಪ್ಪಾರ ಸಮುದಾಯದ ಶಾಸಕ ಪುಟ್ಟರಂಗಶೆಟ್ಟಿಗೆ(Puttarangashetty) ಸಚಿವ ಸ್ಥಾನ ಕೈ ತಪ್ಪಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಕಾಂಗ್ರೆಸ್ ಕಾರ್ಯಕರ್ತ ಪತ್ರ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾನೆ. ಕಾಂಗ್ರೆಸ್ ಪಕ್ಷ ಉಪ್ಪಾರ ಸಮುದಾಯಕ್ಕೆ ನಂಬಿಕೆ ದ್ರೋಹ ಮಾಡಿದೆ.
ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡದಿದ್ದರೇ ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ. ನನ್ನ ಆತ್ಮಹತ್ಯೆಗೆ ಮಲ್ಲಿಕಾರ್ಜುನ ಖರ್ಗೆ, ಸೋನಿಯಾಗಾಂಧಿ, ರಾಹುಲ್ಗಾಂಧಿ, ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಕಾರಣ ಎಂದು ಕಾರ್ಯಕರ್ತ ಚಂದ್ರಶೇಖರ್ ಪತ್ರ ಬರೆದು ಪತ್ರ ಸೋಷಿಯಲ್ ಮೀಡಿಯಾಗಳಲ್ಲಿ ಹರಿಬಿಟ್ಟಿದ್ದಾನೆ.