ಲೋಕಸಭೆಯ ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಆಗಿದ್ದಾರೆ. ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್ ನಾಯಕರು ಹಿಂದೆ ಆಗ್ರಹ ಮಾಡಿದ್ದರು. ಆದರೆ ರಾಹುಲ್ ಗಾಂಧಿ ಕಡೆಯಿಂದ ಯಾವುದೇ ಅಂತಿಮ ತೀರ್ಮಾನ ಬಂದಿರಲಿಲ್ಲ.
ಈಗ ರಾಹುಲ್ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ. ಮೋದಿ ಮೊದಲ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ, ಎರಡನೇ ಅವಧಿಯಲ್ಲಿ ಅಧಿರಂಜನ್ ಚೌಧರಿ ಲೋಕಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಆಗಿದ್ದರು