ತಿರುವನಂತಪುರಂ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಇಂದು ಕೇರಳದಲ್ಲಿ ನಡೆಯಬೇಕಿದ್ದ ಚುನಾವಣಾ ಪ್ರಚಾರವನ್ನು ರದ್ದುಗೊಳಿಸಿದ್ದಾರೆ.ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಹಂಗಾಮಿ ಅಧ್ಯಕ್ಷ, ಯುಡಿಎಫ್ ಸಂಚಾಲಕ ಎಂಎಂ ಹಾಸನ್, ಸೋಮವಾರ ನಡೆಯಬೇಕಿದ್ದ ಗಾಂಧಿಯವರ ಎಲ್ಲಾ ಸಾರ್ವಜನಿಕ ಸಭೆಗಳನ್ನು ರದ್ದುಗೊಳಿಸಲಾಗಿದೆ ಎಂದು ಹೇಳಿದ್ದಾರೆ.
ಸತ್ನಾ ಮತ್ತು ರಾಂಚಿಯಲ್ಲಿ ರಾಹುಲ್ ಗಾಂಧಿ ಪ್ರಚಾರಕ್ಕೆ ಸಿದ್ಧರಾಗಿದ್ದರು. ಆದರೆ ಏಕಾಏಕಿ ಅವರ ಆರೋಗ್ಯದಲ್ಲಿ ಏರಪೇರಾಗಿದ್ದರಿಂದ ಅವರು ಭಾಗವಹಿಸಲಿಲ್ಲ. ಪ್ರಸ್ತುತ ನವದೆಹಲಿಯಲ್ಲಿ ಇದ್ದು, ಬರಲು ಸಾಧ್ಯವಾಗುತ್ತಿಲ್ಲ ಎಂದು ಪಕ್ಷದ ಹಿರಿಯ ನಾಯಕ ಜೈರಾಮ್ ರಮೇಶ್ ಹೇಳಿದರು. ರಾಹುಲ್ ಗಾಂಧಿಯವರು ವಯನಾಡ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ. ಕೇರಳದ 20 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 26 ರಂದು ಚುನಾವಣೆ ನಡೆಯಲಿದೆ.