ಹುಬ್ಬಳ್ಳಿ:- ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕ್ತಿದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ಮಾಡಿದ್ದಾರೆ.
ವಿದೇಶದಲ್ಲಿ ರಾಹುಲ್ ಗಾಂಧಿಯಿಂದ ಅಪ್ರಬುದ್ಧ ಹೇಳಿಕೆ ವಿಚಾರವಾಗಿ ಮಾತನಾಡಿದ್ದು, ರಾಹುಲ್ ಗಾಂಧಿ ಭಾರತದ ಮಾನ ಹರಾಜು ಹಾಕುತ್ತಿದಾರೆ.
ಕಾಂಗ್ರೆಸ್ ಮೀಸಲಾತಿ, ಸಾಮಾಜಿಕ ನ್ಯಾಯದ ವಿರೋಧಿ. ನೆಹರು, ಇಂದಿರಾ, ರಾಜೀವ್ ಗಾಂಧಿ ಹೇಳಿಕೆ ಗಮನಿಸಿದರೆ ಕಾಂಗ್ರೆಸ್ ಸಾಮಾಜಿಕ ವಿರೋಧಿ ಅನ್ನೋದು ಸ್ಪಷ್ಟವಾಗುತ್ತೆ ಎಂದು ವಾಗ್ದಾಳಿ ಮಾಡಿದ್ದಾರೆ
ಅಂಬೇಡ್ಕರ್ಗೆ ಅಪಮಾನ ಮಾಡಿದವರು ಕಾಂಗ್ರೆಸ್ನವರು. ಬಾಬು ಜಗಜೀವನ್ ರಾಮ್ಗೆ ಕಾಂಗ್ರೆಸ್ನಿಂದ ಅನ್ಯಾಯವಾಗಿದೆ. ದಲಿತರು, ಅಲ್ಪಸಂಖ್ಯಾತರನ್ನ ಮತಬ್ಯಾಂಕ್ ಮಾಡ್ಕೊಂಡಿದೆ. ರಾಹುಲ್ ಗಾಂಧಿ ಹೇಳಿಕೆಯನ್ನ ತೀವ್ರವಾಗಿ ಖಂಡಿಸುತ್ತೇನೆ. ರಾಜಕೀಯ ಟೀಕೆ ಭರದಲ್ಲಿ ಇಂಥ ಮಾತು ಸರಿಯಲ್ಲ. ದೇಶದ ಪ್ರತಿಷ್ಠೆಗೆ ರಾಹುಲ್ ಗಾಂಧಿ ಮಸಿ ಬಳಿಯುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ಕಾಮಗಾರಿ ವೇಳೆ ಕಬ್ಬಿಣದ ರಾಡ್ ಬಿದ್ದು ಎಎಸ್ಐಗೆ ಗಾಯ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಇದೊಂದು ದುರ್ದೈವದ ಘಟನೆ, ಈ ರೀತಿ ಆಗಬಾರದಿತ್ತು. ಎಲ್ಲ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕಿತ್ತು. ಈ ಕಾಮಗಾರಿಗೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ. ಇದನ್ನ ರಾಜ್ಯ ಸರ್ಕಾರ ಜಾರಿಗೆ ತರ್ತಾ ಇದ್ದಾರೆ. ಇಂತಹ ಯೋಜನೆಗಳಿಗೆ ಕೇಂದ್ರ ಅನುದಾನವನ್ನ ಕೊಟ್ಟಿಲ್ಲ ಆದರೆ, ಈ ಕಾಮಗಾರಿಗೆ ಅನುದಾನವನ್ನು ಕೊಡಲಾಗಿದೆ. ಗುತ್ತಿಗೆದಾರನ ವಿರುದ್ಧ ಕ್ರಮಕ್ಕೆ ಇಲಾಖೆ ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.