ನವದೆಹಲಿ: ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮೇ 31ರಂದು ಅಮೆರಿಕಕ್ಕೆ (America) ಭೇಟಿ ನೀಡಲಿದ್ದು, 10 ದಿನಗಳ ಕಾಲ ದೇಶಾದ್ಯಂತ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ರಾಹುಲ್ ಗಾಂಧಿ ಜೂನ್ 4 ರಂದು ನ್ಯೂಯಾರ್ಕ್ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್ನಲ್ಲಿ ಸುಮಾರು 5,000 ಅನುವಾಸಿ ಭಾರತೀಯರ (NRI) ಉದ್ದೇಶಿಸಿ ಮಾತನಾಡಲಿದ್ದಾರೆ. ವಾಷಿಂಗ್ಟನ್ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯಗಳಲ್ಲಿ ಚರ್ಚೆ ಮತ್ತು ಭಾಷಣ ನಡೆಸಲಿದ್ದಾರೆ. ಮಾತ್ರವಲ್ಲದೆ ರಾಜಕಾರಣಿಗಳು ಹಾಗೂ ಉದ್ಯಮಿಗಳನ್ನೂ ಭೇಟಿಯಾಗಲಿದ್ದಾರೆ ಎನ್ನಲಾಗಿದೆ.
ಕಳೆದ ಬಾರಿ ರಾಹುಲ್ ಗಾಂಧಿ ಲಂಡನ್ಗೆ ತೆರಳಿ ಕೇಂಬ್ರಿಡ್ಜ್ ವಿಶ್ವವಿದ್ಯಾಲಯದಲ್ಲಿ ಭಾಷಣ ನೀಡಿದ್ದರು. ಆ ಸಮಯ ಅವರು ಭಾರತ ಸರ್ಕಾರವನ್ನು ಟೀಕಿಸಿದ್ದರು. ಎಲ್ಲರಿಗೂ ತಿಳಿದಿರುವಂತೆ ಭಾರತೀಯ ಪ್ರಜಾಪ್ರಭುತ್ವ ಒತ್ತಡದಲ್ಲಿ ಹಾಗೂ ಆಕ್ರಮಣದಲ್ಲಿದೆ ಎಂಬುದು ಸಾಕಷ್ಟು ಸುದ್ದಿಯಲ್ಲಿದೆ. ನಾನು ಭಾರತದಲ್ಲಿ ವಿರೋಧ ಪಕ್ಷದ ನಾಯಕನಾಗಿದ್ದು, ಆ ಜಾಗದಲ್ಲಿ ಸರಿ ದಾರಿಗೆ ತರುವಂತಹ ಕೆಲಸ ಮಾಡುತ್ತಿದ್ದೇನೆ ಎಂದಿದ್ದರು.
ಪ್ರಜಾಸತ್ತಾತ್ಮಕ ಸಂಸತ್ತಿಗೆ ಅಗತ್ಯವಿರುವ ಸಾಂಸ್ಥಿಕ ಚೌಕಟ್ಟು, ಮುಕ್ತ ಪತ್ರಿಕಾ, ನ್ಯಾಯಾಂಗ, ಕೇವಲ ಸಜ್ಜುಗೊಳಿಸುವ ಕಲ್ಪನೆ, ಎಲ್ಲವನ್ನೂ ಸುತ್ತುವ ಮೂಲಕ ನಿರ್ಬಂಧಿತವಾಗುತ್ತಿವೆ. ಹೀಗಾಗಿ ನಾವು ಭಾರತೀಯ ಪ್ರಜಾಪ್ರಭುತ್ವದ ಮೂಲ ರಚನೆಯ ಮೇಲೆ ಹೊಡೆತವನ್ನು ಎದುರಿಸುತ್ತಿದ್ದೇವೆ ಎಂದು ಹೇಳಿದ್ದರು. ರಾಹುಲ್ ಗಾಂಧಿಯ ಈ ಹೇಳಿಕೆ ಆಡಳಿತಾರೂಢ ಬಿಜೆಪಿಗೆ ದೊಡ್ಡ ಪೆಟ್ಟು ಬಿದ್ದಂತಾಗಿದ್ದು, ಬಳಿಕ ರಾಹುಲ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಲಾಗಿತ್ತು.