ಬೆಂಗಳೂರು: ಗುಜರಾತ್ ಹೈಕೋರ್ಟ್ನಿಂದ ರಾಹುಲ್ ಅರ್ಜಿ ವಜಾ ವಿಚಾರವಾಗಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್(DK Sivakumar), ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ದೊಡ್ಡ ಅವಮಾನ ಎಂದರು. ಲೋಕಸಭಾ ಚುನಾವಣೆಯಲ್ಲಿ 7 ಲಕ್ಷ ಲೀಡ್ನಲ್ಲಿ ಗೆದ್ದಿದ್ದಾರೆ. ಗಾಂಧಿ ಕುಟುಂಬ ದೇಶಕ್ಕೆ ತ್ಯಾಗ ಮಾಡಿದೆ.
ನಮ್ಮ ರಾಜ್ಯದಲ್ಲಿ ಭಾಷಣ ಮಾಡಿದ್ದಕ್ಕೆ ರಾಹುಲ್ (Rahul gandhi)ವಿರುದ್ಧ ಕೇಸ್ ಹಾಕಲಾಗಿದೆ. ಇದು ಬಿಜೆಪಿಯ ಕುತಂತ್ರ ಎಂದರು. ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ಮಾಡಿದ್ದರು. ಈ ಮೂಲಕ ರಾಹುಲ್ ದೇಶ ಒಗ್ಗೂಡಿಸುವ ಕೆಲಸ ಮಾಡಿದ್ದಾರೆ. ಇದನ್ನು ಸಹಿಸದೇ ಲೋಕಸಭೆ ಸದಸ್ಯತ್ವದಿಂದ ವಜಾ ಮಾಡಿಸಿದ್ದಾರೆ. ಆದರೆ ಸುಪ್ರೀಂಕೋರ್ಟ್ನಲ್ಲಿ ನ್ಯಾಯ ಸಿಗುತ್ತೆ ಎಂಬ ವಿಶ್ವಾಸ ಇದೆ ಎಂದರು.