ಬೆಂಗಳೂರು:- ಭಾರಿ ಮಳೆ ಹಿನ್ನೆಲೆ ಬೆಂಗಳೂರು ಟು ಮಂಗಳೂರು ಅಥವಾ ಮಂಗಳೂರು ಟು ಬೆಂಗಳೂರು ಮಾರ್ಗ ರಸ್ತೆಗಳು ಬಂದ್ ಆಗಿವೆ.
ಬೆಂಗಳೂರಿನಿಂದ ಮಂಗಳೂರಿಗೆ ತೆರಳಬೇಕಾದರೆ ಚಾರ್ಮುಡಿ ಘಾಟ್, ಶಿರಾಡಿಘಾಟ್ ಮತ್ತು ಮಡಿಕೇರಿಯ ಸಂಪಾಜೆ ಘಾಟ್ ಮೂಲಕ ಹೋಗಬೇಕು.
ಆದರೆ, ಇದೀಗ ಈ ಮಾರ್ಗಗಳಲ್ಲಿ ಗುಡ್ಡ ಕುಸಿಯುವ ಭೀತಿ ಇರುವುದರಿಂದ ಈ ಮಾರ್ಗಗಳನ್ನು ಬಂದ್ ಮಾಡಲಾಗಿದೆ.
ಭೂ ಕುಸಿತದ ಮುಂಜಾಗ್ರತಾ ಕ್ರಮವಾಗಿ ಇಂದಿನಿಂದ ಬೆಂಗಳೂರು-ಮಂಗಳೂರು ನಡುವಿನ ರಾಷ್ಟ್ರೀಯ ಹೆದ್ದಾರಿ ಶಿರಾಡಿಘಾಟ್ನಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಹಾಸನ ಜಿಲ್ಲಾಧಿಕಾರಿ ಸತ್ಯಭಾಮಾ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ಟು ಮಂಗಳೂರಿಗೆ ಅಥವಾ ಮಂಗಳೂರಿನಿಂದ ಬೆಂಗಳೂರಿಗೆ ತೆರಳುವ ಮೂರು ಮಾರ್ಗಗಳಿವೆ. ಒಂದು ಚಾರ್ಮುಂಡಿ ಘಾಟ್ ಮೂಲಕ, ಇನ್ನೊಂದು ಶಿರಾಡಿಘಾಟ್, ಮತ್ತೊಂದು ಮಡಿಕೇರಿ- ಸಂಪಾಜೆ ಘಾಟ್ ಮೂಲಕ ಬೆಂಗಳೂರಿನಿಂದ ಮಂಗಳೂರಿಗೆ ಹೋಗಬಹುದು. ಆದ್ರೆ, ಇದೀಗ ಈ ಎಲ್ಲಾ ರಸ್ತೆ ಮಾರ್ಗಗಳು ಬಂದ್ ಆಗಿವೆ. ಅಲ್ಲಲ್ಲಿ ರಸ್ತೆ ಕುಸಿಯುವ ಭೀತಿ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಎಲ್ಲಾ ಮಾರ್ಗಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ.
ರಾಷ್ರೀಯ ಹೆದ್ದಾರಿ 275ರ ಸಂಪಾಜೆಯಿಂದ ಮಡಿಕೇರಿ ನಡುವೆ ತೀವ್ರ ಮಳೆಯಿಂದಾಗಿ ರಸ್ತೆ ಬದಿ ಗುಡ್ಡ ಕುಸಿಯುವ ಸಾಧ್ಯತೆ ಇದ್ದು, ರಸ್ತೆ ಬಂದ್ ಮಾಡಲಾಗಿದೆ