ಬೆಂಗಳೂರು:- ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮಾಹಿತಿ ನೀಡಿದೆ. ಶಿವಮೊಗ್ಗ, ಮೈಸೂರು, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯಪುರ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎನ್ನಲಾಗಿದೆ. ದಾವಣಗೆರೆ, ರೋಣ, ಆಲಮಟ್ಟಿ, ಹಾವೇರಿ, ಹುಬ್ಬಳ್ಳಿ, ಸವಣೂರು, ಔರಾದ್, ಯಲಬುರ್ಗಾ, ದೇವರಹಿಪ್ಪರಗಿ, ನಾರಾಯಣಪುರ, ಬೀದರ್, ಶೋರಾಪುರ್, ಲಕ್ಷ್ಮೇಶ್ವರ, ಕಮಲಾಪುರ, ಪೊನ್ನಂಪೇಟೆಯಲ್ಲಿ ಮಳೆಯಾಗಿದೆ.
ಕಲಬುರಗಿಯಲ್ಲಿ 41.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದೆ. ಎಚ್ಎಎಲ್ನಲ್ಲಿ 37.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.6 ಡಿಗ್ರಿ ಸೆಲ್ಸಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 37.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 28.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ 37.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.