ಬೆಂಗಳೂರು:– ಏಪ್ರಿಲ್ 8ರ ಬಳಿಕ ಕರ್ನಾಟಕದ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏಪ್ರಿಲ್ 8 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ ಮತ್ತು ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಏಪ್ರಿಲ್ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ಯಾದಗಿರಿ, ಹಾವೇರಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಚಾಮರಾಜನಗರ, ದಾವಣಗೆರೆ, ಹಾಸನ, ಕೊಡಗು, ಚಿತ್ರದುರ್ಗ, ಶಿವಮೊಗ್ಗ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಮುಂದಿನ 3 ದಿನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತಷ್ಟು ಹೆಚ್ಚಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ, ಎಚ್ಎಎಲ್ನಲ್ಲಿ 35.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಕಲಬುರಗಿಯಲ್ಲಿ 42.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.