ಕನ್ನಡದ ನಟ, ನಿರ್ದೇಶಕ ರಾಜ್ ಬಿ ಶೆಟ್ಟಿ ಈಗಾಗಲೇ ಮಲಯಾಳಂ (Malayalam) ಸಿನಿಮಾವೊಂದರಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಬಹುತೇಕ ಶೂಟಿಂಗ್ ಕೂಡ ಮುಗಿದಿದೆ. ಇದೀಗ ಮತ್ತೊಂದು ಅಚ್ಚರಿ ಸುದ್ದಿಯೊಂದು ಮಲಯಾಳಂ ಚಿತ್ರೋದ್ಯಮದಿಂದ ಬಂದಿದ್ದು, ದುಲ್ಕರ್ ಸಲ್ಮಾನ್ ಗಾಗಿ ರಾಜ್ ಶೆಟ್ಟಿ ಚಿತ್ರವೊಂದನ್ನು ನಿರ್ದೇಶನ (Direction) ಮಾಡಲಿದ್ದಾರೆ.
ಈ ಅಚ್ಚರಿಯ ಸುದ್ದಿಯನ್ನು ಹಂಚಿಕೊಂಡಿದ್ದು ಸ್ವತಃ ದುಲ್ಕರ್ ಸಲ್ಮಾನ್ (Dulquer Salmaan). ಅವರದ್ದೇ ನಿರ್ಮಾಣ ಸಂಸ್ಥೆಯಿಂದ ಈ ಚಿತ್ರ ಮೂಡಿ ಬರಲಿದೆ ಎಂದೂ ಅವರು ಹೇಳಿಕೊಂಡಿದ್ದಾರೆ. ಅಲ್ಲಿಗೆ ರಾಜ್ ಬಿ ಶೆಟ್ಟಿ ಮಲಯಾಳಂ ಚಿತ್ರರಂಗಕ್ಕೆ ನಿರ್ದೇಶಕರಾಗಿ ಹಾರಲಿದ್ದಾರೆ ಎನ್ನುವುದು ಲೇಟೆಸ್ಟ್ ಮಾಹಿತಿ
ರಾಜ್ ಬಿ ಶೆಟ್ಟಿ (Raj B Shetty)ಅವರ ನಿರ್ದೇಶನದಲ್ಲಿ ಕೆಲಸ ಮಾಡುವುದಕ್ಕಾಗಿ ನಾನು ಕಾಯುತ್ತಿದ್ದೇನೆ ಎಂದು ದುಲ್ಕರ್ ಮಾತನಾಡಿದ್ದು, ಉಳಿದಂತೆ ಯಾವ ವಿಚಾರವನ್ನೂ ಅವರು ಹಂಚಿಕೊಂಡಿಲ್ಲ. ಬಟ್, ರಾಜ್ ಬಿ ಶೆಟ್ಟಿ ಮಲಯಾಳಂ ಚಿತ್ರೋದ್ಯಮಕ್ಕೆ ನಿರ್ದೇಶಕರಾಗಿ ಬರುವುದು ಪಕ್ಕಾ ಎನ್ನುವುದನ್ನು ಖಚಿತ ಪಡಿಸಿದ್ದಾರೆ.
ವರಮಹಾಲಕ್ಷ್ಮಿ ಹಬ್ಬಕ್ಕೆ ಸರ್ಪ್ರೈಸ್ ಕೊಡಲಿರುವ ಚಂದನ್ ಶೆಟ್ಟಿ: ಏನಂತೀರಾ?