ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ರೆಬೆಲ್ ಸ್ಟಾರ್ ಅಂಬರೀಶ್ ಪುತ್ರ ಅಭಿಷೇಕ್ ಅಂಬರೀಶ್ ಮದುವೆಯಲ್ಲಿ ಭಾಗಿಯಾಗಿ ನವ ಜೋಡಿಗೆ ಶುಭ ಹಾರೈಸಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಮದುವೆ ಕಾರ್ಯಕ್ರಮದಲ್ಲಿ ಭಾಗಿಯಾದ ರಜನಿ ಕೆಲಹೊತ್ತು ಸಮಯ ಕಳೆದು ಬಳಿಕ ಚೆನ್ನೈಗೆ ವಾಪಸ್ ಆಗಿದ್ದಾರೆ.
ಸಾಕಷ್ಟು ವರ್ಷಗಳಿಂದ ಪ್ರೀತಿಸುತ್ತಿದ್ದ ಅಭಿಷೇಕ್ ಅಂಬರೀಶ್ ಅವಿವಾ ಬಿಡಪ್ಪ ಇಂದು ಗೌಡರ ಸಂಪ್ರದಾಯದಂತೆ ಹಸೆಮಣೆ ಏರಿದ್ದಾರೆ. ಗುರು ಹಿರಿಯರ ನಿಶ್ಚಯದಂತೆ ಬೆಳಗ್ಗೆ 9.30 ರಿಂದ 10.30ರ ಒಳಗೆ ಈ ಜೋಡಿ ವಿವಾಹ ಬಂಧನಕ್ಕೆ ಒಳಗಾಗಿದ್ದು, ಈ ಸಂದರ್ಭದಲ್ಲಿ ಸ್ಯಾಂಡಲ್ ವುಡ್ ಅನೇಕ ಗಣ್ಯರು ಹಾಜರಿದ್ದರು.
ಜೂನ್ 7ರಂದು ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ನಲ್ಲಿರುವ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಯಲಿದೆ. ಅಂದು ಎಲ್ಲಾ ಸೆಲೆಬ್ರಿಟಿಗಳು ಭಾಗಿ ಆಗಿ ಔತಣ ಸ್ವೀಕರಿಸಲಿದ್ದಾರೆ. ಬಳಿಕ ಮಂಡ್ಯದಲ್ಲಿ ಅದ್ದೂರಿಯಾಗಿ ಬೀಗರ ಔತಣ ಕೂಡ ಏರ್ಪಡಿಸಲಾಗಿದೆ.