ತಮಿಳಿನ ಸೂಪರ್ ಸ್ಟಾರ್ (Superstar) ರಜನಿಕಾಂತ್ (Rajinikanth) ಆಗಾಗ್ಗೆ ಹಿಮಾಲಯಕ್ಕೆ (Himalaya) ಹೋಗುತ್ತಲೇ ಇರುತ್ತಾರೆ. ಅಲ್ಲದೇ, ಹಿಮಾಲಯದಲ್ಲಿ ಹಲವಾರು ಚಟುವಟಿಕೆಗಳನ್ನೂ ಅವರು ಹಮ್ಮಿಕೊಂಡಿದ್ದಾರೆ. ಹಿಮಾಲಯದಲ್ಲಿ ರಜನಿ ಎಲ್ಲಿರುತ್ತಾರೆ? ಏನು ಮಾಡುತ್ತಾರೆ? ಅವರು ಇರುವ ಸ್ಥಳ ಹೇಗಿರುತ್ತದೆ ಎಂಬಿತ್ಯಾದಿ ಪ್ರಶ್ನೆಗಳು ಅಭಿಮಾನಿಗಳನ್ನು ಕಾಡುತ್ತಲೇ ಇರುತ್ತದೆ. ಈ ಎಲ್ಲದಕ್ಕೂ ಉತ್ತರ ಎನ್ನುವಂತೆ ಕನ್ನಡದ ಬರಹಗಾರ ಸುಪ್ರೀತ್ ಕೆ.ಎನ್ ಬರೆದಿದ್ದಾರೆ. ಸ್ವತಃ ರಜನಿಯನ್ನೂ ಅವರು ಹಿಮಾಲಯದಲ್ಲಿ ಭೇಟಿ ಮಾಡಿದ್ದಾರೆ.
ಆಶ್ರಮಕ್ಕೆ ರಜನಿಕಾಂತ್ ಬಂದಿದ್ದಾರೆ ಎಂದು ನಿತ್ಯದ ಅಭ್ಯಾಸದಂತೆ ಗಂಗಾ ನದಿಯ ದಡಕ್ಕೆ ಹೋಗಿದ್ದಾಗ ಸನ್ಯಾಸಿಗಳೊಬ್ಬರು ಹೇಳಿದರು. ಆಶ್ಚರ್ಯವೇನೂ ಆಗಲಿಲ್ಲ. ರಜನಿಕಾಂತ್ ಆಗಾಗ ಹಿಮಾಲಯಕ್ಕೆ ಹೋಗೋದು, ಹಿಮಾಲಯಕ್ಕೆ ಹೋಗುವಾಗ ಹೃಷಿಕೇಶದ ಈ ಆಶ್ರಮಕ್ಕೆ ಬಂದು ಉಳಿದುಕೊಳ್ಳೋದು ಸಾಮಾನ್ಯ. ಪ್ರಧಾನಿ ಮೋದಿ, ರಜನಿಕಾಂತ್ ಹೀಗೆ ಅನೇಕರಿಗೆ ದಯಾನಂದ ಸರಸ್ವತೀ ಸ್ವಾಮಿಗಳು ಆಧ್ಯಾತ್ಮ ಗುರುಗಳು. ಹಾಗಾಗಿ ಆಶ್ಚರ್ಯವಾಗಲಿಲ್ಲ. ಆಶ್ರಮದೊಳಗೆ ನೋಡಿದರೆ ಗೆಸ್ಟ್ ಹೌಸಿನ ಮುಂದೆ ಒಳ್ಳೆಯ ಕಾರ್ ನಿಂತಿತ್ತು. ಆದರೆ ಪೊಲೀಸ್ ಜೀಪು, ಬೌನ್ಸರ್ಗಳು ಯಾರೂ ಇಲ್ಲ. ಆಮೇಲೆ ಪಾಠಕ್ಕೆಂದು ನಾನು ಸಭಾಂಗಣದೊಳಗೆ ಹೋದ ಐದು ನಿಮಿಷಗಳ ನಂತರ ರಜನಿಕಾಂತ್ ಬಂದ್ರು. ಅವರು ಮನೆಯಿಂದ ಹೊರಬಂದರೆ ಸಾಕು, ಅವರನ್ನು ನೋಡಲು ಸಾವಿರಾರು ಜನ ಕಾಯ್ತಿರ್ತಾರೆ. ಆದರೆ ಪುಟ್ಟ ಸಭಾಂಗಣದಲ್ಲಿ ಇದ್ದದ್ದು ಹೆಚ್ಚೆಂದರೆ 50 ಜನ. ಭಾರತ ಚಿತ್ರರಂಗದ ಸೂಪರ್ ಸ್ಟಾರ್ ಇಲ್ಲಿ ಬಂದಿರುವುದು ನಮಗೆ ಖುಷಿ ತಂದಿದೆ, ಇವತ್ತು ಅವರ ಸಿನಿಮಾ ಬಿಡುಗಡೆ ಆಗ್ತಿದೆ, ಅವರಿಗೆ ಒಳ್ಳೆದಾಗ್ಲಿ ಎಂದಾಗ, ಆ ಸ್ಟಾರ್ಗಿರಿಗೂ ತಮಗೂ ಸಂಬಂಧವೇ ಇಲ್ಲವೆನ್ನುವಂತಹ ನಿರ್ಲಿಪ್ತ ಭಾವ ಅವರ ಮುಖದಲ್ಲಿ.
ಒಂದು ಕಡೆ ರಜನಿಕಾಂತ್ ಅವರ ಜೈಲರ್ (Jailer) ಸಿನಿಮಾ ರಿಲೀಸ್ ಆಗಿದೆ. ಉತ್ತಮ ರೆಸ್ಪಾನ್ಸ್ ಕೂಡ ಪಡೆದುಕೊಂಡಿದೆ. ಮತ್ತೊಂದು ಕಡೆ ರಜನಿಕಾಂತ್ ನೆಮ್ಮದಿಯನ್ನು ಅರಸಿಕೊಂಡು ಹಿಮಾಲಯಕ್ಕೆ ಹೋಗಿದ್ದಾರೆ. ಧ್ಯಾನಕ್ಕೆ ಕೂತಿದ್ದಾರೆ