ಬೆಂಗಳೂರು: ರಾಜ್ಯಸಭೆ,ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಟಿಕೆಟ್ಗಾಗಿ ಕಾಂಗ್ರೆಸ್ನಲ್ಲಿ ಲಾಭಿಗಳು ಆರಂಭಗೊಂಡಿವೆ. ಈ ನಡುವೆ, ಮುಂಬರುವ ಎರಡು ಚುನಾವಣೆಗಳಲ್ಲಿ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡುವಂತೆ ಒತ್ತಡ ಬಂದಿದೆ.
ಈ ಸಂಬಂಧ ಅಖಿಲ ಭಾರತ ಲಿಂಗಾಯತ ಮಹಾಸಭಾದ ಅಧ್ಯಕ್ಷರೂ ಆಗಿರುವ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.
ರಾಜ್ಯಸಭೆಯಲ್ಲಿ ಮೂರು ಸ್ಥಾನಗಳು ಕಾಂಗ್ರೆಸ್ಗೆ ದೊರೆಯಲಿವೆ. ಈ ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ವೀರಶೈವ ಲಿಂಗಾಯತ ಸಮುದಾಯದವರಿಗೆ ನೀಡಬೇಕು. ಲೋಕಸಭೆ ಚುನಾವಣೆಯಲ್ಲಿ ಸಮುದಾಯದ ಜನಸಂಖ್ಯೆ ಅನುಗುಣವಾಗಿ ವೀರಶೈವ ಲಿಂಗಾಯತರಿಗೆ ಆಧ್ಯತೆ ನೀಡಬೇಕು ಎಂದು ಶಾಮನೂರು ಶಿವಶಂಕರಪ್ಪ ಅವರು ಪತ್ರದ ಮೂಲಕ ಒತ್ತಾಯಿಸಿದ್ದಾರೆ.