ಜಮ್ಮು–ಕಾಶ್ಮೀರ: ಅಯೋಧ್ಯೆ ರಾಮ ಮಂದಿರವು ಇನ್ನು ಕೆಲವೇ ದಿನಗಳಲ್ಲಿ ಉದ್ಘಾಟನೆಯಾಗುತ್ತಿದೆ. ಈ ಮಂದಿರಕ್ಕಾಗಿ ಶ್ರಮಿಸಿದ ಪ್ರತಿಯೊಬ್ಬರಿಗೂ ನಾನು ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮತ್ತು ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಅಯೋಧ್ಯೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಕಠಿಣ ಪರಿಶ್ರಮದಿಂದ ಇಂದು ರಾಮಮಂದಿರವು ತಲೆ ಎತ್ತಿ ನಿಂತಿದೆ. ಭಗವಾನ್ ರಾಮನು ಹಿಂದೂಗಳಿಗೆ ಮಾತ್ರ ಸೇರಿದವರಲ್ಲ, ಅವರು ಪ್ರಪಂಚದ ಎಲ್ಲರಿಗೂ ಸೇರಿದವರು ಎಂದು ಹೇಳಲು ಇಚ್ಛಿಸುತ್ತೇನೆ. ಪುಸ್ತಕಗಳಲ್ಲಿಯೂ ಇದನ್ನೇ ಬರೆಯಲಾಗಿದೆ ಎಂದು ಹೇಳಿದರು.
ಭಗವಾನ್ ರಾಮ ಸಹೋದರತ್ವ, ಪ್ರೀತಿ ಮತ್ತು ಏಕತೆಯ ಬಗ್ಗೆ ಮಾತನಾಡಿದ್ದಾರೆ. ಅವರು ಯಾವತ್ತೂ ಭಾಷೆ ಹಾಗೂ ಧರ್ಮದ ಬಗ್ಗೆ ಪ್ರಸ್ತಾಪ ಮಾಡಲಿಲ್ಲ. ಪ್ರೀತಿ ಹಾಗೂ ಒಗ್ಗಟ್ಟಿನಿಂದ ಬಾಳಬೇಕು ಎಂದು ಇಡೀ ಜಗತ್ತಿಗೆ ಸಾರಿದವರಾಗಿದ್ದಾರೆ ಎಂದು ಫಾರೂಕ್ ಅಬ್ದುಲ್ಲಾ ತಿಳಿಸಿದರು.