ಬೆಂಗಳೂರು: ಇಂದು ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ ಎಂದು ಮಾಜಿ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ HAL ನಲ್ಲಿ ಮಾತನಾಡಿದ ಅವರು, ಇಂದು ಸಂಜೆ 4ಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಭೇಟಿಯಾಗಿ, ರಾಜೀನಾಮೆ ಸಲ್ಲಿಸುವೆ.
ನಂತರ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುವೆ. ಬಿಜೆಪಿ ತೊರೆಯಲು ನಿನ್ನೆಯೇ ನಿರ್ಧಾರ ಮಾಡಿದ್ದೇನೆ. ಹಾಗಾಗಿ ಬಿಜೆಪಿಯ ಯಾವುದೇ ನಾಯಕರನ್ನು ಭೇಟಿಯಾಗಲ್ಲ. ನಾನು ಇನ್ನೂ ಬಿಜೆಪಿ ಮನೆಯಲ್ಲೇ ಇದ್ದೇನೆ, ಬೇರೆ ಮಾತಾಡಲ್ಲ.
ಬಿಜೆಪಿಗೆ ರಾಜೀನಾಮೆ ಸಲ್ಲಿಸಿದ ನಂತರ ಬೇರೆ ವಿಚಾರದ ಚರ್ಚೆ ಎಂದು ಹೇಳಿದ್ದಾರೆ.ರಾಜೀನಾಮೆ ಕೊಟ್ಟ ಬಳಿಕ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರ ಭೇಟಿ ಬಗ್ಗೆ ಆಲೋಚನೆ ಮಾಡುತ್ತೇನೆ.
ಚನ್ನರಾಜ ಹಟ್ಟಿಹೊಳಿ ನನ್ನ ಜೊತೆ ಬಂದಿದ್ದಾರೆ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭೇಟಿಯಾಗೋಣ ಅಂತಾ ಅವರೇ ಹೇಳುತ್ತಿದ್ದಾರೆ. ರಾಜೀನಾಮೆ ಬಳಿಕ ಕೆಲವು ವಿಚಾರ ಅವರ ಜೊತೆ ಹಂಚಿಕೊಳ್ಳುತ್ತೇನೆ. ಆ ವಿಚಾರಗಳಿಗೆ ಅವರು ಒಪ್ಪಿದರೆ ತೀರ್ಮಾನ ಮಾಡುತ್ತೇನೆ ಎಂದು ತಿಳಿಸಿದ್ದಾರೆ.
ಇನ್ನೂ ಅಥಣಿ ಕೆಲ ಪ್ರದೇಶ ನೀರಾವರಿಯಿಂದ ವಂಚಿತಗೊಂಡಿದೆ. ನೀರಾವರಿ ಸೌಲಭ್ಯ ಕಲ್ಪಿಸಬೇಕು ಎನ್ನುವುದು ಆಸೆ. ವೈಯಕ್ತಿಕ ಬೇಡಿಕೆ ಅಲ್ಲ, ನೀರಾವರಿ ಬೇಡಿಕೆ ಇಡುತ್ತೇನೆ ಎಂದು ಹೇಳಿದ್ದಾರೆ.