ಬೆಂಗಳೂರು:- ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಎನ್ಐಎಗೆ ವರ್ಗಾವಣೆ ಮಾಡಲಾಗಿದೆ.
ಸೋಮವಾರ ಮಧ್ಯಾಹ್ನ ಎನ್ಐಎ ಅಧಿಕಾರಿಗಳು ಎಫ್ಐಆರ್ ದಾಖಲಿಸಿದ್ದಾರೆ. ಕೇಂದ್ರ ಗೃಹ ಇಲಾಖೆಗೆ ಮಾಹಿತಿ ನೀಡಿ ಎಫ್ಐಆರ್ ದಾಖಲಿಸಿದ ಎನ್ಐಎ ಇಂದಿನಿಂದ ಸ್ಫೋಟದ ಸಂಪೂರ್ಣ ತನಿಖೆ ಆರಂಭಿಸಲಿದೆ.
ದೇಶದ ಒಳಗಡೆ ಯಾವುದೇ ಉಗ್ರ ಚಟುವಟಿಕೆ, ಬಾಂಬ್ ಸ್ಫೋಟದ ತನಿಖೆಯನ್ನು ಎನ್ಐಎ ವಹಿಸಿಕೊಳ್ಳುತ್ತದೆ. ಈ ಹಿಂದೆ ಬೇರೆ ರಾಜ್ಯದಲ್ಲಿ ಹಲವು ಪ್ರಕರಣಗಳಿಗೆ ಹೊಸ ಪ್ರಕರಣಗಳು ಸಾಮ್ಯತೆ ಮತ್ತು ಆರೋಪಿಗಳು ಭಾಗಿಯಾಗಿರುವುದರಿಂದ ಎನ್ಐಎ ಈ ಪ್ರಕರಣಗಳನ್ನು ಬೇಧಿಸುತ್ತದೆ. ಈ ಕಾರಣಕ್ಕೆ ರಾಜ್ಯಗಳು ಉಗ್ರ ಕೃತ್ಯದಂತಹ ಪ್ರಕರಣಗಳು ದಾಖಲಾದಾಗ ಅದನ್ನು ಕೇಂದ್ರ ಸರ್ಕಾರದ ಅಡಿಯಲ್ಲಿರುವ ಎನ್ಐಎಗೆ ವರ್ಗಾಯಿಸುತ್ತದೆ. ಎಲ್ಲಾ ರಾಜ್ಯಗಳ ಗೃಹ ಇಲಾಖೆ ಎನ್ಐಎ ತನಿಖೆಗೆ ಸಹಕಾರ ನೀಡುತ್ತದೆ.