ಇಂದು ರಾಮನಗರ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡುವ ಮೂಲಕ ಬೆಂಗಳೂರಿಗೆ ಸೇರಿಸಿಬೇಕು ಎಂದು ಆಗ್ರಹ ವ್ಯಕ್ತಪಡಿಸಿದರು.
ಈ ಮಧ್ಯೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ನನ್ನ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿದ್ದೆವು ನಾವೆಲ್ಲಾ ಬೆಂಗಳೂರಿನವರೇ ಮೊದಲು ಬೆಂಗಳೂರು ಜಿಲ್ಲೆಗೇ ರಾಮನಗರ ಸೇರಿತ್ತು ನಂತರ ಪ್ರತ್ಯೇಕ ಜಿಲ್ಲೆಯನ್ನಾಗಿ ಮಾಡಲಾಯಿತು
ಈಗ ರಾಮನಗರ ಬದಲಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಹೆಸರು ಬದಲಿಸುವಂತೆ ಕೋರಲಾಗಿದೆ ಇದಕ್ಕೆ ಸಿಎಂ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ಆಗಲಿದೆ…. ಬಳಿಕ ಹೆಸರು ಬದಲಾವಣೆ ಆಗಲಿದೆ ಈಗಿರುವ ರಾಮನಗರವೇ ಹೆಡ್ ಕ್ವಾಟ್ರಸ್ ಆಗಿರಲಿದೆ.
ಮಾಗಡಿ, ಕನಕಪುರ, ಚನ್ನಪಟ್ಟಣ, ಹಾರೋಹಳ್ಳಿ ತಾಲ್ಲೂಕುಗಳು ಬೆಂಗಳೂರು ದಕ್ಷಿಣ ವ್ಯಾಪ್ತಿಗೆ ಸೇರಲಿವೆ ಎಂದು ರಾಮನಗರ ನಿಯೋಗ ಸಿಎಂ ಭೇಟಿ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.