ಖ್ಯಾತ ಜನಪ್ರಿಯ ಶೋ ವೀಕೆಂಡ್ ವಿತ್ ರಮೇಶ್ ಸೀಸನ್ 5ರಲ್ಲಿ ಮೊದಲ ಅತಿಥಿಯಾಗಿ ರಮ್ಯಾ ಭಾಗಿಯಾಗಿದ್ದಾರೆ. ಈ ವಾರಾಂತ್ಯದಲ್ಲಿ ಕಾರ್ಯಕ್ರಮ ಪ್ರಸಾರವಾಗುತ್ತಿದ್ದು ಸದ್ಯ ಇದರ ಪ್ರೋಮೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಸಾಕಷ್ಟು ಸಮಯ ತೆರೆಮರೆಯಲ್ಲಿದ್ದ ರಮ್ಯಾ ಮತ್ತೆ ಸ್ಯಾಂಡಲ್ವುಡ್ ಕಂಬ್ಯಾಕ್ ಆಗಿದ್ದಾರೆ. ಇದೇ ವೇಳೇ ವೀಕೆಂಡ್ ವಿತ್ ರಮೇಶ್ ಶೋನಲ್ಲಿ ತಮ್ಮ ಜೀವನದ ಸಾಕಷ್ಟು ವಿಚಾರಗಳನ್ನು ರಮ್ಯಾ ಹಂಚಿಕೊಂಡಿದ್ದಾರೆ. ಈ ವೇಳೆ ಅಪ್ಪು ನೆನೆದು ರಮ್ಯಾ ಕಣ್ಣೀರಿಟ್ಟಿದ್ದಾರೆ.
ರಮ್ಯಾ ಅವರ ವೃತ್ತಿ ಜೀವನದಲ್ಲಿ ರಾಜ್ಕುಮಾರ್ ಕುಟುಂಬ ವಿಶೇಷವಾಗಿದೆ. ರಮ್ಯಾ ಅವರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದು ಪಾರ್ವತಮ್ಮ. ಅವರಿಗೆ ರಮ್ಯಾ ಎಂದು ನಾಮಕರಣ ಮಾಡಿದ್ದೂ ಕೂಡ ಅವರೇ. ಇದನ್ನು ರಮ್ಯಾ ಉಲ್ಲೇಖ ಮಾಡಿದ್ದಾರೆ. ರಕ್ಷಿತಾ ಜೊತೆಗಿನ ಸ್ಪರ್ಧೆ ಬಗ್ಗೆ ಮಾತನಾಡಿದ್ದಾರೆ. ಶ್ರೀನಗರ ಕಿಟ್ಟಿ ಹಾಗೂ ರಮ್ಯಾ ಅಭಿನಯದ `ಸಂಜು ಮತ್ತು ಗೀತಾ’ ಸಿನಿಮಾ ಯಶಸ್ಸು ಕಂಡಿತ್ತು. ಶ್ರೀನಗರ ಕಿಟ್ಟಿ ಕೂಡ ವೇದಿಕೆ ಏರಿದ್ದಾರೆ. ಈ ವೇಳೆ `ಐ ಲವ್ ಯೂ ಸಂಜು’ ಎಂದಿದ್ದಾರೆ ರಮ್ಯಾ. ಪುನೀತ್ ಹಾಗೂ ರಮ್ಯಾ ಅವರದ್ದು ಹಿಟ್ ಕಾಂಬಿನೇಷನ್. ಆ ಬಗ್ಗೆಯೂ ರಮ್ಯಾ ಮಾತನಾಡಿದ್ದಾರೆ. ರಮ್ಯಾ ಪುನೀತ್ ನೆನೆದು ಕಣ್ಣೀರಿಟ್ಟಿದ್ದಾರೆ.