ಬೆಂಗಳೂರು: ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಇಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಭೇಟಿ ಮಾಡಿದ್ದಾರೆ. ಶಿವಾನಂದ ವೃತ್ತದಲ್ಲಿ ಇರುವ ವಿಪಕ್ಷ ನಾಯಕ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಹತ್ವದ ಚರ್ಚೆ ನಡೆಸಿದ್ದಾರೆ. 2023 ರ ಮತದಾನೋತ್ತರ ಸಮಿಕ್ಷೆಯಲ್ಲಿ ಕಾಂಗ್ರೆಸ್ ಗೆ ಗೆಲುವು ಎಂಬ ವರದಿಗಳು,
ಬಂದಿರುವ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲ ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮುಂದಿನ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕಾಂಗ್ರೆಸ್ ಗೆ ಮೇಲುಗೈ ಆದರೆ ಸರ್ಕಾರ ರಚನೆ ವಿಚಾರವಾಗಿ ಹಾಗೂ ಒಂದು ವೇಳೆ ಅತಂತ್ರ ಸ್ಥಿತಿ ನಿರ್ಮಾಣವಾದರೆ ಮುಂದೆ ಕೈಗೊಳ್ಳಬೇಕಿರುವ ರಣತಂತ್ರದ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಕಳೆದ ಎರಡು ಗಂಟೆಗಳಿಂದ ಇಬ್ಬರು ನಾಯಕರು ಗಂಭೀರ ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.