ಹಾವೇರಿ-ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ಹೂಲಹಳ್ಳಿ ಗ್ರಾಮದ 48 ರಾಷ್ಟ್ರೀಯ ಹೆದ್ದಾರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿಯಾಗಿರುವ ಘಟನೆ ಜರುಗಿದೆ.
ಗಾಯಗೊಂಡ ವ್ಯಕ್ತಿಯನ್ನು 27 ವರ್ಷದ ಚಾಲಕ ಶಿವಾನಂದ ಬಡಗಿ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ದಾವಣಗೆರೆ ಕಡೆಗೆ ಹೊರಟಿದ್ದ ಲಾರಿಯು 48ನೇ ರಾಷ್ಟ್ರೀಯ ಹೆದ್ದಾರಿಯ ಬಳಿ ನಿಯಂತ್ರಣ ತಪ್ಪಿ ಗೂಡ್ಸ್ ಲಾರಿ ಪಲ್ಟಿಯಾಗಿದೆ. ಸರ್ವೀಸ್ ರಸ್ತೆಯ ಜಾಲರಿಗೆ ಹಾಕಿದ್ದ ಕಬ್ಬಿಣದ ಪೈಪ್ ಚಾಲಕನ ಎದೆಯೊಳಗೆ ಹೊಕ್ಕಿದೆ. ರಕ್ತ ಸೋರುತ್ತಿದ್ದರೂ ಚಾಲಕ ದಿಕ್ಕು ತೋಚದೇ ಕುಳಿತು ಬಿಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿಯ ಅಂಬ್ಯುಲೆನ್ಸ್ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ದೌಡಾಯಿಸಿದ್ದು, ಕಬ್ಬಿಣದ ಪೈಪ್ನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.