ನವದೆಹಲಿ:– ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ ಹಾಗೂ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಸುಪ್ರೀಂ ನಲ್ಲಿ ಇಂದು ವಿಚಾರಣೆ ನಡೆಯಲಿದೆ. ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕೆಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮಧ್ಯಪ್ರದೇಶ ಮಾಡಲು ನಿರ್ಧರಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ 10:30ಕ್ಕೆ ವಿಚಾರಣೆ ನಡೆಯಲಿದೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಲಿದೆ.
ಇನ್ನೂ ಕೋಲ್ಕತಾದಲ್ಲಿನ ಸರ್ಕಾರಿ ಸ್ವಾಮ್ಯದ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಹಾಲ್ನಲ್ಲಿ ಆಗಸ್ಟ್ 9ರಂದು ಟ್ರೈನಿ ವೈದ್ಯೆಯ ಶವ ಪತ್ತೆಯಾಗಿತ್ತು. ಎರಡನೇ ವರ್ಷದ ಸ್ನಾತಕೋತ್ತರ ವೈದ್ಯಕೀಯ ಪದವಿ ವಿದ್ಯಾರ್ಥಿಯಾಗಿದ್ದ ಆಕೆ, ಆಗಸ್ಟ್ 8ರ ರಾತ್ರಿ ತಡವಾಗಿ ಊಟ ಮುಗಿಸಿ ಕ್ಯಾಂಪಸ್ನ ಮೂರನೇ ಮಹಡಿಯಲ್ಲಿನ ಸೆಮಿನಾರ್ ಹಾಲ್ಗೆ ಓದುವ ಸಲುವಾಗಿ ತೆರಳಿದ್ದರು. ಮರುದಿನ ಬೆಳಿಗ್ಗೆ ಅವರ ಶವ ಪತ್ತೆಯಾಗಿತ್ತು. ಮರಣೋತ್ತರ ಪರೀಕ್ಷೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ಎಸಗಿ ಕ್ರೂರವಾಗಿ ಹತ್ಯೆಗೈದಿರುವುದು ಬೆಳಕಿಗೆ ಬಂದಿತ್ತು. ಕುತ್ತಿಗೆ ಮುರಿದ ಸ್ಥಿತಿಯಲ್ಲಿ ಕಂಡು ಬಂದಿತ್ತು. ಈ ಪ್ರಕರಣ ದೇಶಾದ್ಯಂತ ಸಂಚಲನ ಸೃಷ್ಟಿಸಿದೆ.