ಗಾಂಧಿನಗರ:- ಗುಜರಾತ್ನಲ್ಲಿ 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದಿದ್ದು, ಮಗುವಿನ ಅಪ್ಪನ ಸ್ನೇಹಿತನಿಂದಲೇ ಕೃತ್ಯ ನಡೆದಿದೆ.
ಕಾಮುಕ ಆರೋಪಿ ಎಸ್ಕೇಪ್ ಆಗಿದ್ದಾನೆ.
ಇನ್ನೂ ಲೈಂಗಿಕ ದೌರ್ಜನ್ಯದ ಸುದ್ದಿ ಹರಡುತ್ತಿದ್ದಂತೆ, ರೊಚ್ಚಿಗೆದ್ದ ಸ್ಥಳೀಯ ನಿವಾಸಿಗಳು ಉಮರ್ಗಾಮ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆ ಮುಂದೆಯೇ ಪ್ರತಿಭಟನೆ ನಡೆಸಿದ್ದಾರೆ. ಆರೋಪಿಯನ್ನ ಬಂಧಿಸಿ, ಕೂಡಲೇ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಇದಾದ ನಂತರ ಪೊಲೀಸರು ಮಧ್ಯಾಹ್ನದ ಒಳಗೆ ಆರೋಪಿಯನ್ನು ಹಿಡಿದು ತರುವುದಾಗಿ ಊರಿನ ಜನರಿಗೆ ಭರವಸೆ ನೀಡಿದ್ದರು. ಆದಾಗ್ಯೂ ಜಗ್ಗದ ಜನ ಶೀಘ್ರ ನ್ಯಾಯ ದೊರಕಿಸಿಕೊಡುವಂತೆ ಹಾಗೂ ಕಾಮುಕನಿಗೆ ಮರಣದಂಡನೆ ವಿಧಿಸುವಂತೆ ಪಟ್ಟು ಹಿಡಿದರು. ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗುತ್ತಿದ್ದಂತೆ ಪೊಲೀಸರು ಉಮರ್ಗಾಮ್ನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದರು
ಸದ್ಯ ತನಿಖೆ ಮುಂದುವರಿಸುತ್ತಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.