ಕಲಬುರ್ಗಿ: ಕಲಬುರಗಿ ಜಿಲ್ಲೆಯಲ್ಲಿ ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರ ಎಸಗಿರುವ ಶಂಕೆಯಿದ್ದು, ಇದರಿಂದ ಇಡೀ ನಾಗರಿಕ ಸಮಾಜವೇ ಇದೀಗ ತಲೆ ತಗ್ಗಿಸುವಂತಹ ಘಟನೆಗೆ ಜಿಲ್ಲೆ ಸಾಕ್ಷಿಯಾಗಿದೆ. ಇನ್ನು ಕಲಬುರಗಿ ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ.
ಕರ್ನಾಟಕದಲ್ಲಿ ಇತ್ತೀಚೆಗೆ ದಿನನಿತ್ಯ ಒಂದಲ್ಲೊಂದು ಕ್ರೈಮ್ಗಳು ನಡೆಯುತ್ತಲೇ ಇದೆ. ಈ ಮಧ್ಯೆ ಕಲಬುರಗಿಯಲ್ಲಿ ಇದೀಗ ಮತ್ತೊಂದು ಭೀಕರ ಕೃತ್ಯ ನಡೆದಿದ್ದು, ಒಂದೂವರೆ ವರ್ಷದ ಹಸುಗೂಸಿನ ಮೇಲೆಯೇ ಅತ್ಯಾಚಾರ ಎಸಗಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಚಿಕಿತ್ಸೆ ಫಲಿಸದೆ ಒಂದೂವರೆ ವರ್ಷದ ಮಗು ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದು, ಮಗುವಿನ ಎರಡು ಭಾಗದಲ್ಲಿ ವಿಕೃತಿ ಮೆರೆದಿರುವಂತಹ ಕುರುಹುಗಳು ಸಹ ಪತ್ತೆಯಾಗಿದೆ. ಈ ಬಗ್ಗೆ ಜಿಲ್ಲೆಯ ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.