ಮೈಸೂರು: ಮಹೋತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ದಸರಾದ ಪ್ರಮುಖ ಆಕರ್ಷಣೆ ಜಂಬೂಸವಾರಿಯಲ್ಲಿ ಪಾಲ್ಗೊಳ್ಳುವ ಗಜಪಡೆಗೆ ತಾಲೀಮು ಚುರುಕುಗೊಳಿಸಲಾಗಿದೆ. ಈ ನಡುವೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅಸಂಸ್ಕೃತಿ ಕಾರ್ಯಕ್ರಮವೊಂದು ನಡೆದಿದೆ. ಮೈಸೂರಿನ ಹೊರವಲಯದಲ್ಲಿ ಹೊರವಲಯದಲ್ಲಿ ರೇವ್ ಪಾರ್ಟಿ ಮೇಲೆ ಪೊಲೀಸರು ದಾಳಿ ಮಾಡಿ ಐವತ್ತಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.
ತಡ ರಾತ್ರಿ ಪಾರ್ಟಿ ಮಾಡುತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ. . ಇಲವಾಲ ಪಿಎಸ್ಐ ಮಂಜುನಾಥ ನಾಯಕ್ ಅವರ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಪಾರ್ಟಿಯಲ್ಲಿದ್ದ 50ಕ್ಕೂ ಹೆಚ್ಚು ಯುವಕರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಇನ್ನೂ ಪ್ರಕರಣ ಸಂಬಂಧ ಎಸ್ಪಿ ವಿಷ್ಣುವರ್ಧನ್ ಮಾತನಾಡಿ, ಪಾರ್ಟಿಯಲ್ಲಿ ಯಾವುದೇ ಮಾದಕ ವಸ್ತು, ಮಾದಕ ದ್ರವ್ಯ ಸಿಕ್ಕಿಲ್ಲ. ಮದ್ಯ ಮತ್ತು ಸಿಗರೇಟ್ ಸ್ಥಳದಲ್ಲಿ ಇತ್ತು. ಅಲ್ಲಿದ್ದ ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸುತ್ತೇವೆ. ಎಫ್ಎಸ್ಎಲ್ ತಂಡ ಸಹ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ. ಈ ಎರಡೂ ವರದಿ ಬಂದ ನಂತರ ಸ್ಪಷ್ಟತೆ ಸಿಗಲಿದೆ ಎಂದು ಹೇಳಿದರು.