RCBಗೆ ಮುಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸವಿದೆ. ಮೊದಲ ಪಂದ್ಯದಲ್ಲಿ ಸಿಎಸ್ಕೆ ವಿರುದ್ಧ ಸೋತಿದ್ದ ಆರ್ಸಿಬಿ, ಆ ಬಳಿಕ ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದು ಗೆಲುವಿನ ಖಾತೆ ತೆರೆದಿತ್ತು.
ಇದಾದ ಬಳಿಕ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳ ವಿರುದ್ಧ ತವರಿನಲ್ಲಿ ಮುಗ್ಗರಿಸಿತ್ತು. ಇದೀಗ ರಾಜಸ್ಥಾನ್ ರಾಯಲ್ಸ್ ವಿರುದ್ಧ ಕೂಡ ಸೋಲುವ ಮೂಲಕ ಹ್ಯಾಟ್ರಿಕ್ ಸೋಲುಂಡಿದೆ. ಈ ಸೋಲಿನೊಂದಿಗೆ ಆರ್ಸಿಬಿ ಅಂಕ ಪಟ್ಟಿಯಲ್ಲಿ 8ನೇ ಸ್ಥಾನಕ್ಕೆ ಕುಸಿದಿದೆ.
ಸದ್ಯ ಸತತ ಸೋಲಿನಿಂದ ಕಂಗೆಟ್ಟಿರುವ ಆರ್ಸಿಬಿ ಮುಂದಿನ ಪಂದ್ಯದಲ್ಲಿ ಗೆಲ್ಲುವ ವಿಶ್ವಾಸದಲ್ಲಿದೆ. ಏಕೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮುಂದಿನ ಪಂದ್ಯವನ್ನು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಅತ್ತ ಮುಂಬೈ ಕೂಡ ಆಡಿರುವ ಮೂರು ಪಂದ್ಯಗಳಲ್ಲೂ ಸೋಲುಂಡು ಅಂಕ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ.
ಹೀಗಾಗಿ ಏಪ್ರಿಲ್ 11 ರಂದು ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ಮೂಲಕ ಆರ್ಸಿಬಿ ಗೆಲುವಿನ ಲಯಕ್ಕೆ ಮರಳುವ ವಿಶ್ವಾಸದಲ್ಲಿದೆ. ಅತ್ತ ಆರ್ಸಿಬಿ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿ ಮುಂಬೈ ಇಂಡಿಯನ್ಸ್.
ಹೀಗಾಗಿ ಸೋಲುಗಳಿಂದ ಕಂಗೆಟ್ಟಿರುವ ಉಭಯ ತಂಡಗಳ ಕದನದಲ್ಲಿ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು. ಈ ಪೈಪೋಟಿಯಲ್ಲಿ ಗೆದ್ದು ಬೀಗುವವರು ಯಾರು ಎಂಬುದು ಏಪ್ರಿಲ್ 11 ರಂದು ಗೊತ್ತಾಗಲಿದೆ.